Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಗಣರಾಜ್ಯೋತ್ಸವದ ಮೇಲೆ ಉಗ್ರ ದಾಳಿ ಕರಿನೆರಳು: ದೆಹಲಿಯಲ್ಲಿ ವ್ಯಾಪಕ ಭದ್ರತೆ!

ನವದೆಹಲಿ: ಅಸಿಯಾನ್ ನಾಯಕರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿರುವ ಹಿನ್ನಲೆಯಲ್ಲಿ ಗಣರಾಜ್ಯೋತ್ಸವಕ್ಕೆ ಕೇಂದ್ರ ಸರ್ಕಾರ ಅಭೂತ ಪೂರ್ವ ಭದ್ರತೆ ಕಲ್ಪಿಸಿದೆ.

ರಾಜಧಾನಿ ದೆಹಲಿ ಸೇರಿದಂತೆ ದೇಶದ ವಿವಿಧ ಪ್ರಮುಖ ನಗರಗಳ ಮೇಲೆ ಉಗ್ರರು ದಾಳಿ ನಡೆಸುವ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ದೆಹಲಿಯಲ್ಲಿ ವ್ಯಾಪಕ  ಭದ್ರತೆ ಕಲ್ಪಿಸಲಾಗಿದೆ. ಗಣರಾಜ್ಯೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೆಹಲಿಯಲ್ಲಿ ವ್ಯಾಪಕ ಭದ್ರತೆ ಒದಗಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಈಗಾಗಲೇ ನಾಕಾಬಂದಿ ಹಾಕಲಾಗಿದ್ದು, ಶಂಕಾಸ್ಪದ ವಾಹನಗಳನ್ನು  ತೀವ್ರ ಶೋಧಕ್ಕೆ ಒಳಪಡಿಸಲಾಗುತ್ತಿದೆ.

ಅಂತೆಯೇ ಈಗಾಗಲೇ ಗಣರಾಜ್ಯೋತ್ಸವ ದಿನದಂದು ಕಾರ್ಯಕ್ರಮ ನಡೆಯಲಿರುವ ರಾಜಪಥದಲ್ಲಿ ವಿಮಾನ ಸಂಚಾರ ನಿಷೇಧಿಸಲಾಗಿದ್ದು, ದೆಹಲಿಗೆ ದೇಶದ ವಿವಿಧೆಡೆಯಿಂದ ಹೆಚ್ಚುವರಿ ಸೇನಾಪಡೆಗಳನ್ನು ನಿಯೋಜಿಸಲಾಗಿದೆ.

ಅತ್ತ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲೂ ವ್ಯಾಪಕ ಭದ್ರತೆ ಕಲ್ಪಿಸಲಾಗಿದ್ದು, ಪ್ರಮುಖವಾಗಿ ಅಂತಾರಾಷ್ಟ್ರೀಯ ಗಡಿಯಲ್ಲಿ ಹೆಚ್ಚುವರಿ ಸೇನಾಪಡೆಗಳನ್ನು ನಿಯೋಜಿಸಲಾಗಿದೆ. ಈಗಾಗಲೇ ಸೈನಿಕ ಹತ್ಯೆಯಿಂದ  ಇಂಡೋ-ಪಾಕ್ ಗಡಿಯಲ್ಲಿ ಪ್ರಕ್ಷುಬ್ದ ವಾತಾವರಣ ನೆಲೆಸಿದ್ದು, ಇದೇ ಕಾರಣಕ್ಕೆ ಹೆಚ್ಚುವರಿ ಸೈನಿಕರನ್ನು ಗಡಿಯಲ್ಲಿ ಸರ್ವಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ಇತ್ತ ರಾಜಧಾನಿ ಶ್ರೀನಗರದಲ್ಲಿ ಸಂಭಾವ್ಯ ಉಗ್ರ ದಾಳಿ ಹತ್ತಿಕ್ಕಲು  ಸೇನಾಪಡೆಗಳು ಸಜ್ಜಾಗಿದ್ದು, ಶ್ರೀನಗರದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಪ್ರಮುಖ ರಸ್ತೆಗಳಲ್ಲಿ ನಾಕಾಬಂದಿ ಹಾಕಲಾಗಿದ್ದು, ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸಿಆರ್ ಪಿಎಫ್ ನ ಕಾಶ್ಮೀರ ಐಜಿ ರವ್ ದೀಪ್ ಸಿಂಗ್ ಸಾಹಿ ಅವರು, ಗಣರಾಜ್ಯೋತ್ಸವಕ್ಕೆ ಉಗ್ರರು ಅಡ್ಡಿಪಡಿಸುವ ಸಾಧ್ಯತೆ ಇದ್ದು, ಈಗಾಗಲೇ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.  ಗಣರಾಜ್ಯೋತ್ಸವ ದಿನದ ಕಾರ್ಯಕ್ರಮಗಳು ಯಾವುದೇ ರೀತಿಯ ಅಡ್ಡಿಯಾಗದಂತೆ ಶಾಂತಿಯುತವಾಗಿ ನಡೆಸುಲು ಬೇಕಾದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

No Comments

Leave A Comment