Log In
BREAKING NEWS >
ಶಿರಾ ಲಾರಿ -ಬಸ್ಸು ಭೀಕರ ರಸ್ತೆ ಅಪಘಾತ 7 ಮಂದಿ ದುರ್ಮರಣ......ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಇಂಧನ ದರ-ಪೆಟ್ರೋಲ್‌, ಡೀಸೆಲ್‌ ದರ ಗರಿಷ್ಠ ಮಟ್ಟಕ್ಕೆ

ಹುಬ್ಬಳ್ಳಿ: ಸಿಲಿಂಡರ್‌ ಲಾರಿ, ಟಿಪ್ಪರ್‌ ಡಿಕ್ಕಿ; ಸಿಲಿಂಡರ್‌ ಸ್ಫೋಟ

ಹುಬ್ಬಳ್ಳಿ: ಸಿಲಿಂಡರ್‌ ಸಾಗಿಸುತ್ತಿದ್ದ ಲಾರಿ ಹಾಗೂ ಟಿಪ್ಪರ್‌ ನಡುವೆ ಡಿಕ್ಕಿ ಸಂಭವಿಸಿ ಲಾರಿಯಲ್ಲಿದ್ದ ಸಿಲಿಂಡರ್‌ ಸ್ಫೋಟಗೊಂಡ ಘಟನೆ ಹುಬ್ಬಳ್ಳಿಯ ಭಂಡಿವಾಡ ಗ್ರಾಮದ ಬಳಿ ಮಂಗಳವಾರ ತಡ ರಾತ್ರಿ ಸಂಭವಿಸಿದೆ.

ಡಿಕ್ಕಿ ರಭಸಕ್ಕೆ ಸಿಲಿಂಡರ್‌ ಸಾಗಿಸುತ್ತಿದ್ದ ಲಾರಿ ರಸ್ತೆ ಮಧ್ಯೆ ಉರುಳಿ ಬಿದಿದ್ದು, ಬೆಂಕಿ ಹೊತ್ತಿಕೊಂಡಿದೆ ಇದರ ಪರಿಣಾಮ ಲಾರಿಯಲ್ಲಿದ್ದ ಸಿಲಿಂಡರ್‌ ಸ್ಫೋಟಗೊಂಡಿದೆ.

ಎಚ್‌ಪಿ ಕಂಪನಿಗೆ ಸೇರಿದ ಸಿಲಿಂಡರ್‌ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿದರು. ಘಟನೆಯಲ್ಲಿ ಎರಡು ವಾಹನಗಳ ಚಾಲಕರು ಹಾಗೂ ಕ್ಲೀನರ್‌ಗಳು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಹುಬ್ಬಳ್ಳಿ ಗದಗ ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

ಹುಬ್ಬಳ್ಳಿ ಗಾಮಾಂತರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment