Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ಮುಖ್ಯ ಕಾರ್ಯದರ್ಶಿ, ಕನ್ನಡ ಚಳುವಳಿ ವಾಟಾಳ್ ಪಕ್ಷಕ್ಕೆ ಕರ್ನಾಟಕ ಹೈ ಕೋರ್ಟ್ ನೋಟಿಸ್

ಬೆಂಗಳೂರು: ಮಹದಾಯಿ ವಿವಾದ ಇತ್ಯರ್ಥಕ್ಕೆ ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷ ಫೆಬ್ರವರಿ ನಾಲ್ಕರಂದು ಕರೆ ನೀಡಿರುವ ಕರ್ನಾಟಕ ಬಂದ್  ಹಿನ್ನೆಲೆಯಲ್ಲಿ ಹೈಕೋರ್ಟ್ ಇಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಿದೆ.

ಈ ಸಂಬಂಧ  ಶಾರಾದ ಪೋಷಕರ ಸಂಘ ಹೈಕೋರ್ಟಿನಲ್ಲಿ ದಾಖಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಹೆಚ್. ಜಿ. ರಮೇಶ್ ಮತ್ತು  ನ್ಯಾಯಮೂರ್ತಿ ಪಿ. ಎಸ್. ದಿನೇಶ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠ, ಬಂದ್ , ಅಥವಾ ಮುಷ್ಕರಕ್ಕೆ ಕರೆ ನೀಡುವುದು ಸಂವಿಧಾನಬಾಹಿರವಾಗಿದ್ದು, ಕೂಡಲೇ ಪ್ರತಿಕ್ರಿಯಿಸುವಂತೆ ಸೂಚನೆ ನೀಡಿದೆ.

ಮಹದಾಯಿ ನದಿ ವಿವಾದ ಸಂಬಂಧ ಫೆಬ್ರವರಿ 4 ರಂದು ಕನ್ನಡ ಚಳುವಳಿ ವಾಟಾಳ್ ಪಕ್ಷ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಬಂದ್ ನಿಂದಾಗಿ  ಸಾರ್ವಜನಿಕರಿಗಾಗುವ ನಷ್ಟವನ್ನು ಕಟ್ಟಿಕೊಡುವಂತೆ ದೂರುದಾರರು ಆಗ್ರಹಿಸಿದ್ದರು.

No Comments

Leave A Comment