Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಬೀದರ್‌ ಬಂದ್‌;ಲಾಠಿ ಚಾರ್ಜ್‌

ಬೀದರ: ಕೋಸಂ ಗ್ರಾಮದ ವಿದ್ಯಾರ್ಥಿನಿ ಹತ್ಯೆ ಪ್ರಕರಣಕ್ಕೆ ಜಿಲ್ಲೆಯಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಘಟನೆ ಖಂಡಿಸಿ ಹಿಂದುಪರ ಸಂಘಟನೆಗಳಿಂದ ಕರೆ ನೀಡಲಾಗಿದ್ದ ಬೀದರ ಬಂದ್‌ಗೆ  ಮಂಗಳವಾರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಜೆಪಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಂದ ಬೆಂಬಲ ವ್ಯಕ್ತವಾಗಿದೆ.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮತ್ತು ಹಿಂದು ಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದು, ಘಟನೆಯಲ್ಲಿ ಸಂಸದ ಭಗವಂತ್‌ ಖೂಬಾ ಸೇರಿದಂತೆ ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ನಗರದಲ್ಲಿ ಯಾವುದೇ  ಬಸ್‌, ಆಟೋಗಳು ರಸ್ತೆಗಿಳಿದಿಲ್ಲ. ನಗರದಲ್ಲಿ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ಬಂದ್‌ ಮಾಡಿದ್ದಾರೆ ಎಂದು ವರದಿಯಾಗಿದೆ.

ಕೋಮು ಸೂಕ್ಷ್ಮ ವಿಚಾರವಾಗಿರುವ ಹಿನ್ನಲೆಯಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಸರ್ಕಾರಿ ಶಾಲಾ- ಕಾಲೇಜುಗಳಿಗೆ ಯಾವುದೇ ರಜೆ ಘೋಷಣೆ ಮಾಡಿಲ್ಲ. ಆದರೆ, ಅನುದಾನ ರಹಿತ ಖಾಸಗಿ ಶಾಲೆಗಳ ರಜೆ ಘೋಷಣೆ ಮಾಡಲಾಗಿದೆ.

ಸೋಮವಾರ ನಗರದಲ್ಲಿ ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೃಹತ್‌ ಪ್ರತಿಭಟನೆ ನಡೆಸಿ ಘಟನೆಯನ್ನು ಖಂಡಿಸಿದ್ದರು.

ಖಾಸಗಿ ಕಾಲೇಜಿನಲ್ಲಿ  ದ್ವಿತೀಯ ಬಿಎ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಭಾಲ್ಕಿ ತಾಲೂಕಿನ ಗಾಯಮುಖ ಅರಣ್ಯ ಪ್ರದೇಶದಲ್ಲಿ ಶನಿವಾರ ಸಂಜೆ ಅತ್ಯಾಚಾರಕ್ಕೆ ಯತ್ನಿಸಿ  ಚಾಕುವಿನಿಂದ ಕುತ್ತಿಗೆ ಕೊಯ್ದು ಹತ್ಯೆಗೈಯಲಾಗಿತ್ತು.

ಕೃತ್ಯ ಎಸಗಿರುವ ಆರೋಪಿ  ಭಾಲ್ಕಿ ತಾಲೂಕಿನ ಕೋಸಂ ಗ್ರಾಮದ ಶಮಶುದ್ದೀನ್‌ (24)  ಎಂಬ ಯುವಕನನ್ನು  ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಶಮಶುದ್ದೀನ್‌ ಪರಿಚಯ ಹೊಂದಿದ್ದ ಯುವತಿ ಅರಣ್ಯ ಪ್ರದೇಶಕ್ಕೆ ಆತನೊಂದಿಗೆ ತೆರಳಿದ್ದಾರೆ ಎನ್ನಲಾಗಿದ್ದು ಸಂಜೆ 6ರ ಸುಮಾರಿಗೆ ಮೃತದೇಹ ಸಿಕ್ಕಿದ್ದು, ಕೊಲೆಗೂ ಇನ್ನೂ ಖಚಿತ ಕಾರಣ ತಿಳಿದು ಬಂದಿಲ್ಲ. ಅತ್ಯಾಚಾರಕ್ಕೆ ಯತ್ನ ನಡೆದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಶವ ಪರೀಕ್ಷೆ ವರದಿ ಬಂದ ನಂತರ ಸ್ಪಷ್ಟ ಮಾಹಿತಿ ಗೊತ್ತಾಗಲಿದೆ.

ಮೃತಳ ಸಹೋದರ ದೂರಿನ ಮೇರೆಗೆ ಧನ್ನೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment