Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

150 ವರ್ಷದ ಬಳಿಕದ ಕೌತುಕ; ದೇವರಿಗೂ ತಟ್ಟಲಿದೆ ಖಗ್ರಾಸ ಚಂದ್ರಗ್ರಹಣ!

ಬೆಂಗಳೂರು/ಉಡುಪಿ/ಮಂಗಳೂರು: ಖಗ್ರಾಸ ರಕ್ತ ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಜ.31ರಂದು ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರ, ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಮಧ್ಯಾಹ್ನದಿಂದ ರಾತ್ರಿ 9ರವರೆಗೆ ದೇವರ ದರ್ಶನ ಹಾಗೂ ಪೂಜಾ ಸೇವೆ ಇರುವುದಿಲ್ಲ ಎಂದು ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಗರಿಕೆ ಹುಲ್ಲಿನಿಂದ ಶಿವಲಿಂಗವನ್ನು ಮುಚ್ಚಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಪ್ರಧಾನ ಅರ್ಚಕರು ತಿಳಿಸಿದ್ದಾರೆ.

ಅದೇ ರೀತಿ ಉಡುಪಿ ಕೃಷ್ಣಮಠದಲ್ಲಿಯೂ ಕೂಡಾ ಬೆಳಗ್ಗೆ 8ಗಂಟೆಯೊಳಗೆ ಮಹಾಪೂಜೆ,ಸಂಜೆ ಚಂದ್ರೋದಯದೊಳಗೆ ಮಹಾಪೂಜೆ ನೆರವೇರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಅನ್ನಸಂತರ್ಪಣೆ ಸೇವೆಯೂ ಇರುವುದಿಲ್ಲ ಎಂದು ದೇವಾಲಯದ ಪ್ರಕಟಣೆಯಲ್ಲಿ ಹೇಳಿದೆ.

150 ವರ್ಷಕ್ಕೊಮ್ಮೆ ನಡೆಯೋ ಗ್ರಹಣ ಇದು!

ಬುಧವಾರ (ಜ. 31) ನಡೆಯುವ ಚಂದ್ರಗ್ರಹಣ ವಿಶೇಷವಾದುದು. ಅದು ಕೇವಲ ಹುಣ್ಣಿಮೆಯಲ್ಲ, ಸೂಪರ್‌ಮೂನ್‌ ಹುಣ್ಣಿಮೆ. ಜತೆಗೆ ಖಗ್ರಾಸ ಗ್ರಹಣದೊಂದಿಗೆ ಚಂದ್ರೋದಯವಾಗಲಿದೆ. ಹೀಗಾಗುವುದು ಸುಮಾರು 150 ವರ್ಷಕ್ಕೊಮ್ಮೆ ಎನ್ನುತ್ತಾರೆ ಖಗೋಳ ಪರಿಣತರು.

Read more at https://www.udayavani.com/kannada/news/state-news/268456/january-31-blue-blood-moon-not-a-supermoon#TUkBLcJgpbO7bzRE.99

No Comments

Leave A Comment