Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಯಾದಗಿರಿಯಲ್ಲಿ ಸೇವಾಲಾಲ್‌ ಜಯಂತಿ ವೇಳೆ ಘರ್ಷಣೆ;ಲಾಠಿ ಚಾರ್ಜ್‌

ಯಾದಗಿರಿ: ಜಿಲ್ಲೆಯ ಶಾಹಾಪುರದ ಚಮನಾಳ್‌ ಗ್ರಾಮದಲ್ಲಿ  ಸೇವಾಲಾಲ್‌ ಜಯಂತಿ ಆಚರಣೆಯ ವೇಳೆ 2 ಜಾತಿಗಳ ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಗುರುವಾರ ಬೆಳಗ್ಗೆ ನಡೆದಿದ್ದು , ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್‌ ನಡೆಸಿದ್ದಾರೆ.

ಬಂಜಾರ ಸಮುದಾಯದವರು ಸೇವಾಲಾಲ್‌ ಮೂರ್ತಿ ಪ್ರತಿಷ್ಠಾಪಿಸಲು ಮುಂದಾದಾಗ ವಾಲ್ಮೀಕಿ ಸಮುದಾಯದವರು ಆಕ್ಷೇಪ ವ್ಯಕ್ತಪಡಿಸಿದ್ದು ಈ ವೇಳೆ ಘರ್ಷಣೆ ನಡೆದಿದೆ.

ಪರಿಸ್ಥಿತಿ ನಿಯಂತ್ರಣಕ್ಕಾಗಿ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದ್ದು ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

No Comments

Leave A Comment