Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಹಿಮಾಚಲ ಪ್ರದೇಶ: ಶಿಕ್ಷಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಹಮೀರ್‌ಪುರ, ಹಿಮಾಚಲ ಪ್ರದೇಶ : ಇಲ್ಲಿನ ಖಾಸಗಿ ಕಾಲೇಜೊಂದರ ಹಿರಿಯ ಶಿಕ್ಷಕನು ತನ್ನ ವಿದ್ಯಾರ್ಥಿನಿಯೋರ್ವಳನ್ನು ಕಾಲೇಜಿನ ಸ್ಟಾಫ್ ರೂಮಿನಲ್ಲಿ ಕೂಡಿ ಹಾಕಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ವರದಿಯಾಗಿದೆ.

ಅತ್ಯಾಚಾರ ಎಸಗಿದ ಕೆಮಿಸ್ಟ್ರಿ ಶಿಕ್ಷಕನು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಸ್ಟಾಫ್ ರೂಮಿಗೆ ಕರೆಸಿಕೊಂಡು ಒಳಗಿನಿಂದ ಅಗುಳಿ ಹಾಕಿ ಆಕೆಯ ಮೇಲೆ ಅತ್ಯಾಚಾರ ನಡಸಿದ ಎಂದು ಗೊತ್ತಾಗಿದೆ.

ಸಂತ್ರಸ್ತ ವಿದ್ಯಾರ್ಥಿನಿಯು ತನ್ನಮೇಲಾದ ಅತ್ಯಾಚಾರವನ್ನು ಕಾಲೇಜಿನಲ್ಲಿ ಇತರರ ಬಳಿ ಹೇಳಿಕೊಂಡಾಗಲೇ ಈ ವಿಷಯ ಮೊನ್ನೆ ಗುರುವಾರ ಬೆಳಕಿಗೆ ಬಂತು.

ವಿಷಯ ತಿಳಿಯುತ್ತಲೇ ನೂರಾರು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಬೀದಿಯಲ್ಲಿ ಮೆರವಣಿಗೆ ನಡೆಸಿ ಘಟನೆಯನ್ನು ಉಗ್ರವಾಗಿ ಖಂಡಿಸಿದರು. ಆರೋಪಿ ಶಿಕ್ಷಕನಿಗೆ ನ್ಯಾಯಾಲಯ ಮರಣ ದಂಡನೆ ಶಿಕ್ಷೆಯನ್ನು ನೀಡಬೇಕು ಎಂದವರು ಆಗ್ರಹಿಸಿದರು.

ಪಟ್ಟಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಈಚಿನ ದಿನಗಳಲ್ಲಿ ತೀರ ಹದಗೆಟ್ಟಿದ್ದು ಹುಡುಗಿಯರಿಗೆ ಭದ್ರತೆಯೇ ಇಲ್ಲವಾಗಿದೆ ಎಂದು ವಿದ್ಯಾರ್ಥಿಗಳು ದೂರಿದರು.

ಅತ್ಯಾಚಾರ ಎಸಗಿದ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ಮುಖ್ಯಸ್ಥ ರಮಣ್‌ ಕುಮಾರ್‌ ಮೀಣ ತಿಳಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆ ವಿದ್ಯಾರ್ಥಿನಿಯ ಹೇಳಿಕೆಯನ್ನು ಪಡೆದು ಅದನ್ನು ಕೋರ್ಟಿಗೆ ಸಲ್ಲಿಸಲಾಗುವುದು ಎಂದವರು ಹೇಳಿದರು.

No Comments

Leave A Comment