Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಉದ್ಧಟತನ- ಓರ್ವ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ತಂಗ್ಧಾರ್’ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ.

ಪೇದೆ ಎಸ್.ಕೆ. ಮುರ್ಮು (28) ಹುತಾತ್ಮರಾದ ಯೋಧರಾಗಿದ್ದಾರೆ. ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿಗೆ ಮುರ್ಮು ಅವರು ಗಂಭೀರವಾಗಿ ಗಾಯಗೊಂಡಿದ್ದರು. ರಾತ್ರಿ 8.30ರ ಸುಮಾರಿಗೆ ಶ್ರೀನಗರ ಆಸ್ಪತ್ರೆಯಲ್ಲಿ ಹುತಾತ್ಮರಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ತಂಗ್ಧಾರ್ ಪ್ರದೇಶದ ಕರ್ನಾಪ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಮುರ್ಮು ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ಸಂಜೆ 4.30ರ ಸುಮಾರಿಗೆ ಪಾಕಿಸ್ತಾನ ಸೇನೆ ಇದ್ದಕ್ಕಿದ್ದಂತೆ ಅಪ್ರಚೋದಿತ ಗುಂಡಿನ ದಾಳಿ ನಡೆಸಲು ಆರಂಭಿಸಿತ್ತು. ಪರಿಣಾಮ ಮುರ್ಮು ಅವರ ಹೊಟ್ಟೆಗೆ ಗುಂಡು ತಗುಲಿತ್ತು. ಬಳಿಕ ಮುರ್ಮು ಅವರನ್ನು ಹೆಲಿಕಾಪ್ಟರ್ ಮೂಲಕ ಶ್ರೀನಗರಕ್ಕೆ ಕರೆದೊಯ್ಯಲಾಗಿತ್ತು ಎಂದಿದ್ದಾರೆ.

ಮುರ್ಮು ಅವರು ಬಿಹಾರ ರಾಜ್ಯದ ಜುಮುಯ್ ಜಿಲ್ಲೆ ಮೂಲದವರಾಗಿದ್ದು, 2013ರಲ್ಲಿ ಗಡಿ ಭದ್ರತಾ ಪಡೆಗೆ ಸೇರ್ಪಡೆಗೊಂಡಿದ್ದರು.

No Comments

Leave A Comment