Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಅಂಬಲಪಾಡಿ ಸನಿವಾಸ ಶಿಬಿರ ಉದ್ಘಾಟನೆ

ಉಡುಪಿ : ಯಕ್ಷಗಾನ ಕಲಾರಂಗದ ವಿದ್ಯಾಪೆÇೀಷಕ್ ಘಟಕ ಕಳೆದ ಏಳು ವರ್ಷಗಳಿಂದ ನಡೆಸಿಕೊಂಡು ಬಂದಿರುವ ಪ್ರಥಮ ಪಿ.ಯು ಮುಗಿಸದ ಫಲಾನುಭವಿ ವಿದ್ಯಾರ್ಥಿಗಳ ಐದು ದಿನಗಳ ಅನಿವಾಸ ಶಿಬಿರವನ್ನು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ.ಬೀ ವಿಜಯ ಬಲ್ಲಾಳರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ದೇವಳದ ಭವಾನಿ ಮಂಟಪದಲ್ಲಿ ಜರಗಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ಕೆ.ಎಸ್ ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮೆನೇಜ್‍ಮೆಂಟ್‍ನ ಡೀನ್ ಡಾ. ಅನಂತಪದ್ಮನಾಭ ಆಚಾರ್ ವಹಿಸಿ ಮಾತನಾಡಿದ ಅವರು ಯಕ್ಷಗಾನ ಕಲಾರಂಗದ ಸಮಾಜಮುಖಿ ಕಾರ್ಯಕ್ರಮ ಬೆರಗುಗೊಳಿಸುವಂಥದ್ದು ಎಂದು ಅಭಿಪ್ರಾಯಪಟ್ಟರು.

ಮಂಗಳೂರು ಇನ್ಫೋಸಿಸ್ ಇದರ ವರಿಷ್ಠರಾದ ಶ್ರೀ ವಾಸುದೇವ ಕಾಮತ್, ರಾಜಾಸ್ ಡೆಂಟಲ್ ಕೇರ್ ಮಣಿಪಾಲ ಇದರ ಡಾ. ಗಾಯತ್ರಿ, ಕಿದಿಯೂರು ನಾಗಲಕ್ಷ್ಮೀ ಶ್ರೀನಿವಾಸ ಚಾರಿಟೇಬಲ್ ಟ್ರಸ್ಟ್‍ನ ಕೋಶಾಧಿಕಾರಿ ಶ್ರೀ ಕೆ. ಕೃಷ್ಣಮೂರ್ತಿ, ಮಾಹೆ ವಿಶ್ವವಿದ್ಯಾಲಯದ ಸಾರ್ವಜನಿಕ ಸಂಪರ್ಕ ವಿಭಾಗದ ನಿರ್ದೇಶಕ ಶ್ರೀ ಬಾಬಣ್ಣ ಶೆಟ್ಟಿಗಾರ್ ಹಾಗೂ ಶಿಬಿರದ ನಿರ್ದೇಶಕ ಪ್ರವೀಣ್ ಗುಡಿ ಮುಖ್ಯ ಅಭ್ಯಾಗತರಾಗಿ ಸಮಯೋಚಿತ ಮಾತುಗಳಿಂದ ಶಿಬಿರಾರ್ಥಿಗಳನ್ನು ಪೆÇ್ರೀತ್ಸಾಹಿಸಿದರು.

250 ವಿದ್ಯಾರ್ಥಿಗಳು ಭಾಗವಹಿಸಿದ್ದು ಶಿಬಿರದಲ್ಲಿ ಆಂಗ್ಲಭಾಷಾ ಕೌಶಲ, ಸಂವಹನ ಕೌಶಲ, ನಾಯಕತ್ವ ತರಬೇತಿ, ವೃತ್ತಿ ಮಾರ್ಗದರ್ಶನ, ಸಮೂಹ ಸಹಭಾಗಿತ್ವ, ಸಮಾಜಮುಖಿ ಚಿಂತನೆ ಹಾಗೂ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದ ಬಗ್ಗೆ ತರಬೇತಿ ಪಡೆಯಲಿದ್ದಾರೆ.
ಸಂಸ್ಥೆಯ ಅಧ್ಯಕ್ಷ ಕೆ. ಗಣೇಶ್ ರಾವ್ ಸ್ವಾಗತಿಸಿ ಉಪಾಧ್ಯಕ್ಷ ಎಂ. ಗಂಗಾಧರ ರಾವ್ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.

No Comments

Leave A Comment