Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಕಂಚಿ ಕಾಮಕೋಟಿ ಪೀಠದ ಪೀಠಾಧಿಪತಿ ಜಯೇಂದ್ರ ಸರಸ್ವತಿ ನಿಧನ

ಕಂಚೀಪುರಂ: ಕಾಮಕೋಟಿ ಮಠದ ಶಂಕರಾಚಾರ್ಯ ಪೀಠದ ಶ್ರೀ ಜಯೇಂದ್ರ ಸರಸ್ವತಿ ಸ್ವಾಮೀಜಿ ಅವರು ಗುರುವಾರ ಕಾಲೈಕ್ಯರಾಗಿದ್ದಾರೆ.ಅವರಿಗೆ 82 ವರ್ಷ ವಯಸ್ಸಾಗಿತ್ತು.

1954 ರಿಂದ ಕಂಚಿ ಪೀಠದ 69 ನೇ ಪೀಠಾಧಿಪತಿಯಾಗಿ ಜಯೇಂದ್ರ ಸರಸ್ವತಿಗಳು ಧಾರ್ಮಿಕ ಕಾರ್ಯಗಳಲ್ಲಿ ನಿರತರಾಗಿದ್ದರು.

ವಯೋಸಹಜ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀಗಳು ಚೆನ್ನೈನ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ  ಕೊನೆಯುಸಿರೆಳೆದಿರುವುದಾಗಿ ವರದಿಯಾಗಿದೆ.

ಹಲವು ವಿವಾದಗಳು, ಪ್ರಕರಣಗಳೂ ಶ್ರೀಗಳ ವಿರುದ್ಧ ಕೇಳಿ ಬಂದಿದ್ದವು.

ಶ್ರೀಗಳಿಗೆ ತಮಿಳು ನಾಡು ಸೇರಿದಂತೆ ವಿಶ್ವಾದ್ಯಂತ ಅಪಾರ ಭಕ್ತರಿದ್ದಾರೆ.

No Comments

Leave A Comment