Log In
BREAKING NEWS >
ನಾಡಿನ ಸಮಸ್ತ ಜನತೆಗೆ, ನಮೆಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನಾಗರ ಪ೦ಚಮಿ ಹಾಗೂ ನೇ ಸ್ವಾತ೦ತ್ರೋತ್ಸವದ ಶುಭಾಶಯಗಳು....

ಐಎನ್‌ಎಕ್ಸ್‌ ಮೀಡಿಯಾ ಕೇಸ್‌ : ಕಾರ್ತಿ ಚಿದಂಬರಂ ಅರೆಸ್ಟ್‌ !

ಚೆನ್ನೈ : ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಐಎನ್‌ಎಕ್ಸ್‌ ಮೀಡಿಯಾ ಕೇಸ್‌ ಗೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಚೆನ್ನೈನ ನಿವಾಸದಲ್ಲಿ ಲಂಡನ್‌ನಿಂದ ವಾಪಾಸಾಗಿರುವ ಕಾರ್ತಿ ಅವರನ್ನು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ನಿನ್ನೆಯಷ್ಟೇ ಕಾರ್ತಿ ಅವರ ಸಿಎ ಭಾಸ್ಕರನ್‌ ಅವರನ್ನು ಸಿಬಿಐ ವಶಕ್ಕೆ ಪಡೆದಿತ್ತು.

ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಆರೋಪಿ ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿಯೂ ಆಗಿರುವ ಇಂದ್ರಾಣಿ ಮುಖರ್ಜಿಗೆ  14 ದಿನಗಳ  ನ್ಯಾಯಾಂಗ ಬಂಧನ ವಿಧಿಸಲಾಗಿದೆ.

2007ರಲ್ಲಿ ಮಾರಿಷಸ್‌ನಿಂದ ಬಂಡವಾಳ ಪಡೆಯುವ ವೇಳೆ ಎಫ್ಐಪಿಬಿ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಲಾಗಿರುವುದು ಕಂಡು ಬಂದ ಹಿನ್ನಲೆಯಲ್ಲಿ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದೆ.

ಅಕ್ರಮ ಹಣ ವರ್ಗಾವಣೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಕಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment