ಬೆಂಗಳೂರು: ರಾಜ್ಯ ಬಿಜೆಪಿ ಘಟಕ ಇಂದಿನಿಂದ ಮೂರು ದಿನ ಆಯೋಜಿಸಿರುವ ಬೆಂಗಳೂರು ರಕ್ಷಿಸಿ ಪಾದಯಾತ್ರೆಗೆ ಚಾಲನೆ ಸಿಕ್ಕಿದೆಬೆಂಗಳೂರಿನ ಗವಿಪುರಂ ನ ಗವಿಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಕೆಂಪೇಗೌಡರ ಪ್ರತಿಮೆಗೆ ನಮನ ಸಲ್ಲಿಸಿದ ನಂತರ ಈ ಪಾದಯಾತ್ರೆಗೆ ಚಾಲನೆ ನೀಡಲಾಯಿತು.
ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಕೇಂದ್ರ ಸಚಿವ ಅನಂತ್ ಕುಮಾರ್, ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ ಸೇರಿದಂತೆ ಬಿಜೆಪಿಯ ಘಟಾನುಘಟಿ ನಾಯಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಬೆಂಗಳೂರಿನ ಪ್ರಮುಖ 10 ಸಮಸ್ಯೆಗಳನ್ನು ಮುಂದಿಟ್ಟುಕೊಂಡು, ಅವುಗಳ ಪರಿಹಾರದಲ್ಲಿ ರಾಜ್ಯಸರ್ಕಾರ ಹೇಗೆ ವಿಫಲವಾಗಿದೆ ಎಂಬುದನ್ನು ಜನರಿಗೆ ತಿಳಿಸುವುದೇ ಈ ಪಾದಯಾತ್ರೆಯ ಪ್ರಮುಖ ಉದ್ದೇಶವಾಗಿದೆ.
ಬೆಂಗಳೂರು ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲೂ ಈ ಪಾದಯಾತ್ರೆ ಸಾಗಲಿದೆ. ನಲಪಾಡ್ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಕುರಿತಾಗಿಯೂ ಜನರಿಗೆ ತಿಳಿವಳಿಕೆ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ.