Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಕೆಪಿಜೆಪಿಗೆ ಉಪೇಂದ್ರ ಗುಡ್ ಬೈ, ಶೀಘ್ರವೇ ಹೊಸ ಪಕ್ಷ ಸ್ಥಾಪನೆ

ಬೆಂಗಳೂರು: ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಇಂದಿನಿಂದ ನನಗೂ, ಕೆಪಿಜೆಪಿಗೂ ಯಾವುದೇ ಸಂಬಂಧವಿಲ್ಲ. ನಾವೆಲ್ಲರೂ ಸೇರಿ ಒಮ್ಮತದ ತೀರ್ಮಾನಕ್ಕೆ ಬಂದಿರುವುದಾಗಿ ನಟ ಉಪೇಂದ್ರ ಮಂಗಳವಾರ ಘೋಷಿಸಿದ್ದಾರೆ.

ಇಂದು ರುಪ್ಪೀಸ್ ರೆಸಾರ್ಟ್ ನಲ್ಲಿ ಬೆಂಬಲಿಗರ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಇವರನ್ನೆಲ್ಲಾ ಸೇರಿಸಿಕೊಂಡು ಕೂಡಲೇ ಹೊಸ ಪಕ್ಷ ಸ್ಥಾಪನೆ ಮಾಡುತ್ತೇವೆ. ಇದೇ ಪ್ರಜಾಕೀಯ ಉದ್ದೇಶ ಇಟ್ಟುಕೊಂಡು ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಹೇಳಿದರು.

ಕೆಪಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಗೌಡ ಹಾಗೂ ಉಪೇಂದ್ರ ನಡುವೆ ಸೀಟು ಹಂಚಿಕೆ ವಿಷಯದಲ್ಲಿ ಭಿನ್ನಾಭಿಪ್ರಾಯ ಮೂಡಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಮಹೇಶ್ ಗೌಡ ಹಾಗೂ ಉಪೇಂದ್ರ ಪತ್ರಿಕಾಗೋಷ್ಠಿ ನಡೆಸಿದ್ದರು.

No Comments

Leave A Comment