Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಶಾರದಾ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ಪೂಜಿಸಲ್ಪಟ್ಟ ಶ್ರೀಶಾರದಾ ವಿಗ್ರಹ ಇ೦ದು ವಿಸರ್ಜನಾ ಮೆರವಣಿಗೆಗೆ ಸಕಲ ಸಿದ್ದತೆ........ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಜಟಾಪಟಿ ; ಬಿಜೆಪಿ ಪಾದಯಾತ್ರೆಗೆ ಅಡ್ಡ ಬಂದ ಕೈ ಕಾರ್ಯಕರ್ತರು

ಬೆಂಗಳೂರು: ಬಿಜೆಪಿ ನಡೆಸುತ್ತಿರುವ ಬೆಂಗಳೂರು ರಕ್ಷಿಸಿ ಪಾದಾಯಾತ್ರೆ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಅಡ್ಡಬಂದು ಧಿಕ್ಕಾರ ಕೂಗಿದ ಘಟನೆ ಮಂಗಳವಾರ ಚಾಮರಾಜಪೇಟೆಯಲ್ಲಿ ನಡೆದಿದೆ.

ಬಿಜೆಪಿ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಮೆರವಣಿಗೆ ಸಾಗುತ್ತಿದ್ದ ವೇಳೆ 40 ಕ್ಕೂ ಹೆಚ್ಚು ಕಾಂಗ್ರೆಸ್‌ ಕಾರ್ಯಕರ್ತರು ರಸ್ತೆಗೆ ಅಡ್ಡ ಬಂದು ಕಪ್ಪು ಬಾವುಟಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದರು. ಈ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸ್ಥಳದಲ್ಲಿದ್ದ ಪೊಲೀಸರು ಕಾಂಗ್ರೆಸ್‌ ಕಾರ್ಯಕರ್ತರನ್ನು ಪಕ್ಕದ ರಸ್ತೆಗೆ ಎಳೆದೊಯ್ದು ಯಾವುದೇ ಅಹಿತಕರ ಘಟನೆಯಾಗದಂತೆ ಕ್ರಮ ಕೈಗೊಂಡರು. ಸ್ಥಳಕ್ಕೆ ಕೂಡಲೇ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಯಿತು.

ಕಾಂಗ್ರೆಸ್‌ ನ ಗೂಂಡಾಗಿರಿಯನ್ನು ನೀವು ನೋಡುತ್ತಿದ್ದೀರಿ

ಕಾಂಗ್ರೆಸ್‌ ನಡೆಸಿದ ಪ್ರತಿಭಟನೆ ಕುರಿತಾಗಿ ನೆರಿದ್ದಿದ್ದ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಶಾಸಕ ಆರ್‌.ಅಶೋಕ್‌ ‘ನಾನೊಬ್ಬ ಮಾಜಿ ಉಪಮುಖ್ಯಮಂತ್ರಿ , ಸಂಸದ ಪಿ.ಸಿ.ಮೋಹನ್‌, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್‌ , ಕಾರ್ಪೋರೇರ್ಟ್‌ಗಳೆಲ್ಲಾ  ಇದ್ದೇವೆ. ನಮ್ಮ ಮೇಲೆ ಹಲ್ಲೆ ಮಾಡಲು ಬರುತ್ತಿದ್ದಾರೆ. ಇಲ್ಲೇ ನೀವು ನೋಡುತ್ತಿದ್ದೀರಲ್ಲಾ’  ಎಂದು ಕಿಡಿ ಕಾರಿದರು.

No Comments

Leave A Comment