Log In
BREAKING NEWS >
ಉಡುಪಿ:ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಮಹೋತ್ಸವದ ಶುಭಾರoಭ... ಭಜನಾ ಸಪ್ತಾಹ ಮಹೋತ್ಸವದ 1`ದಿನ ಶ್ರೀದೇವರಿಗೆ ಮತ್ಸ್ಯಲoಕಾರ

ಮಹಾರಾಷ್ಟ್ರ: ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ- 3 ಜನರ ಸಾವು, ಐವರಿಗೆ ಗಾಯ

ಪಾಲ್ಘಾನ್; ಮಹಾರಾಷ್ಟ್ರ ರಾಜ್ಯದ ಪಾಲ್ಘಾರ್’ನಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ತಾರಾಪುರ್ ಎಂಐಡಿಸಿ ಪ್ರದೇಶದಲ್ಲಿರುವ ಖಾಸಗಿ ರಾಸಾಯನಿಕ ಕಾರ್ಖಾನೆಯಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಿಂದ ಕಾರ್ಖಾನೆ ಹೊತ್ತುಉರಿದಿದೆ. ಬೆಂಕಿಯ ಕೆನ್ನಾಲಿಗೆ ಪಕ್ಕದಲ್ಲಿಯೇ ಇರುವ ಮತ್ತೆರಡು ಕಾರ್ಖಾನೆಗಳಿಗೂ ತಗುಲಿದೆ ಎಂದು ವರದಿಗಳು ತಿಳಿಸಿವೆ.
ಘಟನೆ ವೇಳೆ ಕಾರ್ಖಾನೆಯಲ್ಲಿದ್ದ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ ಐವರನ್ನು ರಕ್ಷಣೆ ಮಾಡಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಬಳಿಕ ಪಾಲ್ಘಾರ್ ಜಿಲ್ಲಾಧಿಕಾರಿ ಪ್ರಶಾಂತ್ ನರ್ನಾವಾರೆ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀನೆ ನಡೆಸುತ್ತಿದ್ದಾರೆ.
No Comments

Leave A Comment