Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ತಮಿಳುನಾಡು ಸರಣಿ ಅಪಘಾತಕ್ಕೆ ಇಬ್ಬರು ಮಹಿಳೆಯರು ಸೇರಿ 5 ಸಾವು

ಕೃಷ್ಣಗಿರಿ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೂಳಗಿರಿಯಲ್ಲಿ ಮಂಗಳವಾರ ಮುಂಜಾನೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಬೆಂಗಳೂರಿನ ಇಬ್ಬರು ಮಹಿಳೆಯರು ಸೇರಿ ಐದು ಮಂದಿ ಸಾವನ್ನಪ್ಪಿದ್ದು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತರಲ್ಲಿ ಸುಮತಿ (45) ಶಂಕರ್ (50) ಸುಮತಿ, ಮಣಿ ಮತ್ತು ಕುಬೇರನ್ ಇವರೆಲ್ಲರೂ ಬೆಂಗಳೂರಿನ ಲಕ್ಷ್ಮೀನಾರಾಯಣಪುರ ನಿವಾಸಿಗಳೆಂದು ತಿಳಿದುಬಂದಿದೆ. ಗಾಯಗೊಂಡಿರುವ ಆನಂದ್ ಸ್ಥಿತಿ ಗಂಭೀರವಾಗಿದ್ದು ಅವರನ್ನು ಕೃಷ್ಣಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಎಸ್ಆರ್ ಟಿಸಿ ಬಸ್, ಲಾರಿ ಹಾಗೂ ಮಾರುತಿ ಇಕೋ ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತ.

ಘಟನೆ ವಿವರ : ಇಕೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಪ್ರಯಾಣಿಕರು ಚೆನ್ನೈ ನಲ್ಲಿ ತಮ್ಮ ಸಂಬಂಧಿಕರ ಮನೆಯಿಂದ ವಾಪಸು ಬರುತಿದ್ದ ಸಂದರ್ಭ ಎದುಗಡೆಯಿಂದ ಹೋಗುತಿದ್ದ ಲಾರಿಯೊಂದು ರಸ್ತೆಯ ಡಿವೈಡರಿಗೆ ಡಿಕ್ಕಿ ಹೊಡೆಯಿತು ಹಿಂಬದಿಯಲ್ಲಿದ್ದ ಇಕೋ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ ಈ ಸಂದರ್ಭ ಕಾರಿನ ಹಿಂಬದಿಯಲ್ಲಿದ್ದ KSRTC ಬಸ್ಸು ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಲಾರಿ ಮತ್ತು ಬಸ್ಸಿನ ನಡುವೆ ಸಿಲುಕಿಕೊಂಡ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಬಸ್ಸಿನಲ್ಲಿ ಪ್ರಯಾಣಿಸಯುತಿದ್ದ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

No Comments

Leave A Comment