Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

‘ಕೈ’ಹಿಡಿದ ರಸಿಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪ್ರತಿಭಾ ಕುಳಾಯಿ

ಮಂಗಳೂರು: ಶಾಸಕರ ನಿವಾಸದಲ್ಲಿ ಸಾರ್ವಜನಿಕವಾಗಿ ರಸಿಕತನ ತೋರಿದ ಕಾಂಗ್ರೆಸ್‌ ಮುಖಂಡನೊಬ್ಬನಿಗೆ ಮಹಿಳಾ ಕಾರ್ಪೋರೇಟರ್‌ ಹಿಗ್ಗಾಮುಗ್ಗಾ ಥಳಿಸಿದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ಮಂಗಳೂರು ಉತ್ತರ ಶಾಸಕ ಮೊಯಿದ್ದೀನ್‌ ಬಾವಾ ಅವರ ಕಚೇರಿಯಲ್ಲಿ ಸೋಮವಾರ ಸಂಜೆ ಘಟನೆ ನಡೆದಿರುವುದಾಗಿ ವರದಿಯಾಗಿದ್ದು , ಕಾಂಗ್ರೆಸ್‌ ಕಾರ್ಯದರ್ಶಿ ಅಬ್ದುಲ್‌ ಸತ್ತಾರ್‌ ಎಂಬಾತ ಕಾರ್ಪೋರೇಟರ್‌ ಕೈ ಹಿಡಿದು ಥಳಿತಕ್ಕೊಳಗಾಗಿದ್ದಾನೆ ಎಂದು ತಿಳಿದು ಬಂದಿದೆ.

ಪ್ರತಿಭಾ ಅವರು ಕೈ ಹಿಡಿದ ಕೂಡಲೇ ಕೆಂಡಮಂಡಲವಾಗಿದ್ದಾರೆ ಎನ್ನಲಾಗಿದ್ದು , ಸತ್ತಾರ್‌ಗೆ ಅಟ್ಟಾಡಿಸಿಕೊಂಡು ಮನೆಯಿಂದ ಹೊರಗೆಳೆದು ಥಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿಲ್ಲ.

ಅಬ್ದುಲ್‌ ಸತ್ತಾರ್‌  ವಿರುದ್ಧ ಮಹಿಳೆಯರಿಗೆ ಕಿರುಕುಳ ನೀಡಿದ ಹಲವು ಆರೋಪಗಳಿದ್ದು, ಈ ಹಿಂದೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿ ಕೈಯನ್ನೂ ಕಡಿದಿದ್ದರು ಎಂದು ತಿಳಿದು ಬಂದಿದೆ.

No Comments

Leave A Comment