Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಕೇಂದ್ರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಬೆಂಬಲಿಸಲುTDP ಸಿದ್ಧ

ಹೈದರಾಬಾದ್‌ : ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಷಯದಲ್ಲಿ  ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲ್ಪಟ್ಟಲ್ಲಿ ನಾವದನ್ನು ಬೆಂಬಲಿಸುತ್ತೇವೆ ಎಂದು ಟಿಡಿಪಿ ಮುಖ್ಯಸ್ಥ ಮತ್ತು ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿರುವ ಚಂದ್ರಬಾಬು ನಾಯ್ಡು ಇಂದು ಗುರುವಾರ ಹೇಳಿದ್ದಾರೆ.

ಯಾರೇ ಆದರೂ ಅವಿಶ್ವಾಸ ಗೊತ್ತುವಳಿಯನ್ನು ಮಂಡಿಸಿದಲ್ಲಿ ನಾವು ಅದನ್ನು ಬೆಂಬಲಿಸುತ್ತೇವೆ ಎಂದು ನಾಯ್ಡು ಹೇಳಿದರು.

“ಟಿಡಿಪಿ ಎನ್‌ಡಿಎ 1ರ ಭಾಗವಾಗಿತ್ತು. ನಾವು ಅಧಿಕಾರಕ್ಕಾಗಿ ಆಸೆ ಪಟ್ಟಿಲ್ಲ. ವಾಜಪೇಯಿಜೀ ಅವರು ಟಿಡಿಪಿಗೆ ಆರು ಸಚಿವ ಪದವನ್ನು ಕೊಟ್ಟಿದ್ದರು; ಆದರೆ ನಾವದನ್ನು ತೆಗೆದುಕೊಳ್ಳಲಿಲ್ಲ. ವಾಜಪೇಯಿಜೀ ಅವರ ಆಡಳಿತಾವಧಿಯಲ್ಲಿ ಅವರು ನಮ್ಮೊಂದಿಗೆ ಸಮಾಲೋಚಿಸಿ ನಮ್ಮ ಸಲಹೆಗಳನ್ನು ಕೇಳುತ್ತಿದ್ದರು. ಗೋಲ್ಡನ್‌ ಕ್ವಾಡ್ರಿಲ್ಯಾಟರಲ್‌ ಯೋಜನೆಯು ನಮ್ಮೊಂದಿಗಿನ ಚರ್ಚೆಯ ಫ‌ಲಶ್ರುತಿಯಾಗಿತ್ತು ಎಂದು ನಾಯ್ಡು ಅವರು ರಾಜ್ಯ ವಿಧಾನಸಭೆಯಲ್ಲಿ ಹೇಳಿದರು.

ವೈಎಸ್‌ಆರ್‌ಸಿಪಿ ಲೋಕಸಭೆಯಲ್ಲಿ  ಇದೇ ಶುಕ್ರವಾರ ಮಂಡಿಸಲಿರುವ ಅವಿಶ್ವಾಸ ಗೊತ್ತುವಳಿಗೆ ಬೆಂಬಲ ಪಡೆಯುವ ನಿಟ್ಟಿನಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಸಂಸದ ವೈ ವಿ ಸುಬ್ಟಾ ರೆಡ್ಡಿ ಅವರು ಇಂದು  ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ, ಸಿಪಿಎಂ ನ ಸೀತಾರಾಮ ಯೆಚೂರಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಭೇಟಿಯಾಗಿ ಅವರಿಗೆ, ಅವಿಶ್ವಾಸ ಗೊತ್ತುವಳಿಗೆ ಬೆಂಬಲ ಕೋರುವ ಜಗನ್‌ಮೋಹನ್‌ ರೆಡ್ಡಿ ಅವರ ಪತ್ರವನ್ನು ಕೊಟ್ಟಿದ್ದಾರೆ.

ಅವಿಶ್ವಾಸ ಗೊತ್ತುವಳಿಯ ಬಳಿಕವೂ ಕೇಂದ್ರ ಸರಕಾರ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದಿದ್ದರೆ ನಮ್ಮ ಪಕ್ಷದ ಎಲ್ಲ ಸಂಸದರು 2018ರ ಎಪ್ರಿಲ್‌ 6ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವರು ಎಂಬುದಾಗಿ ರೆಡ್ಡಿ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

No Comments

Leave A Comment