Log In
BREAKING NEWS >
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಕ್ಕೆ ಮೇ ೧೦ರ೦ದು ಶ್ರೀಗೋಕರ್ಣಮಠಾಧೀಶರು ತಮ್ಮ ಶಿಷ್ಯರೊ೦ದಿಗೆ ಆಗಮಿಸಲಿದ್ದು ೫ದಿನಗಳ ಕಾಲ ಮೊಕ್ಕ೦ ಹೂಡಲಿದ್ದಾರೆ....

ಗೋಸಾಗಾಣಿಕೆದಾರರ ಮೇಲೆ ದಾಳಿ- ಕುಮಟಾದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಸೂರಜ್‌ ದೆಹಲಿಯಲ್ಲಿ ಅರೆಸ್ಟ್‌

ಹೊಸದಿಲ್ಲಿ: ಅಕ್ರಮ ಗೋಸಾಗಾಣಿಕೆ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕುಮಟಾದ ಬಿಜೆಪಿ ಮುಖಂಡ ಸೂರಜ್‌ ನಾಯ್ಕ ಸೋನಿ ಅವರನ್ನು ದೆಹಲಿಯಲ್ಲಿ  ಬಂಧಿಸಲಾಗಿದೆ.

ಮಾರ್ಚ್‌ 7 ರಂದು ಹೊನ್ನಾವರದಲ್ಲಿ  ಭಟ್ಕಳಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಮೂವರು ಅಕ್ರಮ ಗೋಸಾಗಾಣಿಕೆದಾರರನ್ನು ತಡೆದು ಹಿಗ್ಗಾಮುಗ್ಗಾ ಥಳಿಸಲಾಗಿತ್ತು. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೂರಜ್‌ ಸೇರಿದಂತೆ 127 ಜನರ ವಿರುದ್ಧ  ಸೆಕ್ಷನ್‌ 307 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ದೆಹಲಿಗೆ ಕಾರ್ಯ ನಿಮಿತ್ತ ತೆರಳಿದ್ದ ಸೂರಜ್‌ರನ್ನು ನಿಜಾಮುದ್ದೀನ್‌ ರೈಲು ನಿಲ್ದಾಣದಲ್ಲಿ ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

ಸೂರಜ್‌ ಕಳೆದ ಬಾರಿ ಕುಮಟಾದ ಬಿಜೆಪಿ ಅಭ್ಯರ್ಥಿಯಾಗಿ ಸೋಲು ಅನುಭವಿಸಿದ್ದರು. ಈ ಬಾರಿಯೂ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ.

No Comments

Leave A Comment