Log In
BREAKING NEWS >
BJP ಅಂತಿಮ ಪಟ್ಟಿ ಪ್ರಕಟ, 4 ಕ್ಷೇತ್ರ ನಿಗೂಢ; ಶೋಭಾಗೂ ಟಿಕೆಟ್ ಇಲ್ಲ....ನೋಯ್ಡಾ : ಮಹಾ ಪಾತಕಿ ಬಾಲರಾಜ್‌ ಭಾಟಿ ಎನ್‌ಕೌಂಟರ್‌ಗೆ ಬಲಿ...

ಮೇವು ಹಗರಣ:ಲಾಲುಗೆ 7 ವರ್ಷ ಜೈಲು,30 ಲಕ್ಷ ರೂಪಾಯಿ ದಂಡ

ರಾಂಚಿ: ಮೇವು ಹಗರಣದ 4 ನೇ ಪ್ರಕರಣದಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಯಾದವ್‌ ಗೆ ಜಾರ್ಖಂಡ್‌ನ‌ ವಿಶೇಷ ಸಿಬಿಐ ನ್ಯಾಯಾಲಯ ಶನಿವಾರ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಧುಮ್ಕಾ ಖಜಾನೆಯಿಂದ 1990ರಲ್ಲಿ 3.13 ಕೋಟಿ ರೂ. ಅಕ್ರಮವಾಗಿ ವರ್ಗಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಈ ಶಿಕ್ಷೆ ವಿಧಿಸಲಾಗಿದ್ದು 30 ಲಕ್ಷ ರೂಪಾಯಿ ದಂಡವನ್ನೂ ವಿಧಿಸಲಾಗಿದೆ.

ಸಿಬಿಐ ನ್ಯಾಯಾಧೀಶ ಶಿವಪಾಲ್‌ ಸಿಂಗ್‌ ಸೋಮವಾರ ಈ ಸಂಬಂಧ ತೀರ್ಪು ಪ್ರಕಟಿಸಿದ್ದಾರೆ.

ಪ್ರಕರಣದ ಇನ್ನೊಬ್ಬ ಪ್ರಮುಖ ಆರೋಪಿ ಮಾಜಿ ಸಿಎಂ ಜಗನ್ನಾಥ ಮಿಶ್ರಾರನ್ನು ನಿರಪರಾಧಿ ಎಂದು ಘೋಷಿಸಿತ್ತು.

ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಲಾಲು ಪ್ರಸಾದ್‌ ಬೆಂಬಲಿಗರು ಮುಂದಾಗಿದ್ದಾರೆ.

No Comments

Leave A Comment