Log In
BREAKING NEWS >
ನಾಡಿನ ಸಮಸ್ತ ಜನತೆಗೆ, ನಮೆಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನಾಗರ ಪ೦ಚಮಿ ಹಾಗೂ ನೇ ಸ್ವಾತ೦ತ್ರೋತ್ಸವದ ಶುಭಾಶಯಗಳು....

‘ಗೋಡೆ’ ಖ್ಯಾತಿಯ ರಾಹುಲ್ ದ್ರಾವಿಡ್ ಕರ್ನಾಟಕ ಚುನಾವಣೆಯ ಬ್ರಾಂಡ್ ಅಂಬಾಸಿಡರ್!

2018ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಇದರ ಬೆನ್ನಲ್ಲೇ ಭಾರತದ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಚುನಾವಣೆಯ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಮುಖ್ಯ ಚುನಾವಣಾ ಆಯುಕ್ತ ಒಪಿ ರಾವತ್ ಅವರು ರಾಹುಲ್ ದ್ರಾವಿಡ್ ಅವರನ್ನು ಚುನಾವಣಾ ರಾಯಭಾರಿಯಾಗಿ ನೇಮಿಸಿರುವುದಾಗಿ ಹೇಳಿದರು. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ. 12ರಂದು ಮತದಾನ ನಡೆಯಲಿದ್ದು, ಮೇ 15ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಏಪ್ರಿಲ್ 17ರದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ  ಸಲ್ಲಿಕೆ ಆರಂಭವಾಗುತ್ತದೆ. ಏಪ್ರಿಲ್ 24ರಂದು ನಾಮಪತ್ರ ಸಲ್ಲಿಕೆ ಕೊನೆಯ ದಿನವಾಗಿದ್ದು, ಏಪ್ರಿಲ್ 25ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 27ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ತಿಳಿದುಬಂದಿದೆ.
ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಒಟ್ಟು 4 ಕೋಟಿ 96 ಲಕ್ಷ ಮತದಾರಿದ್ದಾರೆ. ಅವರಲ್ಲಿ 2 ಕೋಟಿ 51 ಲಕ್ಷ ಪುರುಷ ಮತದಾರಿದ್ದರೆ, 2 ಕೋಟಿ 44 ಲಕ್ಷ ಮಹಿಳಾ ಮತದಾರರಿದ್ದಾರೆ. ಕನ್ನಡ, ಇಂಗ್ಲಿಷ್​ನಲ್ಲಿ ಮತದಾರರ ಚೀಟಿ ಇರುತ್ತದೆ ಎಂದು ರಾವತ್​ ತಿಳಿಸಿದರು.
ರಾಜ್ಯದಲ್ಲಿ ಒಟ್ಟು  4,96. 357 ಕೋಟಿ ಮತದಾರರಿದ್ದಾರೆ. ಒಂದೇ ಒಂದು ಹಂತದ ಮತದಾನ ಇಲ್ಲಿ ನಡೆಯಲಿದ್ದು, 56,000 ಮತಗಟ್ಟೆಗಳಿರಲಿವೆ. ಈ ಬಾರಿ ಇವಿಎಂ ಜತೆ ವಿವಿ ಪ್ಯಾಟ್ (ಮತ ಖಾತರಿ ಯಂತ್ರ) ಇರಲಿದೆ. ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ವಿಶೇಷ ಸೌಲಭ್ಯವಿರಲಿದೆ.
No Comments

Leave A Comment