Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

ಕೈ ಗೆ ಗುಡ್‌ ಬೈ: ಮಾಲೀಕಯ್ಯ ಗುತ್ತೇದಾರ್‌ ಬಿಜೆಪಿ ಸೇರ್ಪಡೆ

ಬೆಂಗಳೂರು: ಹೈದರಾಬಾದ್‌ ಕರ್ನಾಟಕದ ಪ್ರಭಾವಿ ಕಾಂಗ್ರೆಸ್‌ ಶಾಸಕ ಮಾಲೀಕಯ್ಯ ಗುತ್ತೇದಾರ್‌ ಕೊನೆಗೂ ಕಾಂಗ್ರೆಸ್‌ ಪಕ್ಷ  ತೊರೆದಿದ್ದು, ಗುರುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗುತ್ತೇದಾರ್‌ ‘ನಾನು ಸಚಿವ ಸ್ಥಾನ ನೀಡಲಿಲ್ಲ ಎಂದು ಬಿಜೆಪಿಗೆ ಸೇರುತ್ತಿಲ್ಲ.ಕಾಂಗ್ರೆಸ್‌ನಲ್ಲಿ ನಡೆದ ಕೆಲ ವಿದ್ಯಮಾನಗಳು ನನಗೆ ನೋವು ತಂದಿವೆ. ರಾಜ್ಯದಲ್ಲಿ ಎನ್‌ಸಿಪಿಗೆ ಭವಿಷ್ಯ ಇಲ್ಲ ಎಂದು ಆ ಪಕ್ಷ ಸೇರಲಿಲ್ಲ’ ಎಂದರು.

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ, ಅಂಗೀಕಾರವಾದ ಬಳಿಕ ಮೈಸೂರಿನಲ್ಲಿ ಅಮಿತ್‌ ಶಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗುತ್ತೇನೆ’ ಎಂದರು.

ಈಡಿಗ ಸಮುದಾಯಕ್ಕೆ ಸೇರಿರುವ ಗುತ್ತೇದಾರ್‌ ಅವರು ಹೈದರಾಬಾದ್‌ ಕರ್ನಾಟಕದಲ್ಲಿ ತನ್ನದೇ ಆದ ಬೆಂಬಲಿಗರನ್ನು ಹೊಂದಿದ್ದಾರೆ. ಅವರನ್ನು ಪಕ್ಷಕ್ಕೆ ಸೆಳೆಯಲು ಜೆಡಿಎಸ್‌ ಸಹ ಪ್ರಯತ್ನ ನಡೆಸಿತ್ತು.

No Comments

Leave A Comment