Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಆಲಿಕಲ್ಲು ಮಳೆ, ಧರೆಗುರುಳಿದ ಮರಗಳು

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಶುಕ್ರವಾರ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಆಲಿಕಲ್ಲು ಸಹಿತ ಮಳೆಯಾಗಿದ್ದು, ಬಿಸಿಲಿನ ಝಳದಿಂದ ತತ್ತರಿಸಿ ಹೋಗಿದ್ದ ಜನರಿಗೆ ವರುಣ ದೇವ ತುಸು ತಂಪು ನೀಡಿದ್ದಾನೆ.

ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ರಾಮಮೂರ್ತಿ ನಗರ, ಜಾಲಹಳ್ಳಿ, ಮಲೇಶ್ವರಂ ಸೇರಿದಂತೆ ಬೆಂಗಳೂರಿನ ಹಲವೆಡೆ ಇಂದು ಸಂಜೆ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ.

ಮಲ್ಲೇಶ್ವರ ಹಾಗೂ ಯಶವಂತಪುರದಲ್ಲಿ ಭಾರಿ ಮಳೆಗೆ ಹಲವು ಮರಗಳು ಧರೆಗುರುಳಿದ್ದು, ಟ್ರಾಫಿಕ್ ಜಾಮ್ ನಿಂದಾಗಿ ಜನ ಪರದಾಡುವಂತಾಗಿದೆ.

ನೆಲಮಂಗಲ, ದೊಡ್ಡಬಳ್ಳಾಪುರ, ತಾವರೆಕೆರೆಯಲ್ಲಿ ಗಾಳಿ, ಗುಡುಗು ಸಹಿ ಭಾರಿ ಮಳೆಯಾಗಿದೆ. ಹಾಸನ, ಬೆಂಗಳೂರು ಗ್ರಾಮಾಂತರ, ಕೋಲಾರದಲ್ಲೂ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

No Comments

Leave A Comment