Log In
BREAKING NEWS >
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಕ್ಕೆ ಮೇ ೧೦ರ೦ದು ಶ್ರೀಗೋಕರ್ಣಮಠಾಧೀಶರು ತಮ್ಮ ಶಿಷ್ಯರೊ೦ದಿಗೆ ಆಗಮಿಸಲಿದ್ದು ೫ದಿನಗಳ ಕಾಲ ಮೊಕ್ಕ೦ ಹೂಡಲಿದ್ದಾರೆ....

ಸಿಲಿಂಡರ್ ಸ್ಫೋಟ 4 ಮಕ್ಕಳು ಸೇರಿ 9 ಮಂದಿಗೆ ಗಂಭೀರ ಗಾಯ

ಬೆಂಗಳೂರು : ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡು ನಾಲ್ಕು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ ಪೀಣ್ಯ ಸಮೀಪದ ದಾಸರಹಳ್ಳಿಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ತುಮಕೂರು ಜಿಲ್ಲೆಯ ಪಾವಗಡ ಮೂಲದ ದೇವರಾಜು, ಲಕ್ಷ್ಮಮ್ಮ , ವೆಂಕಟೇಶ, ಮಹೇಶ್ವರಮ್ಮ, ಸೋಮಶೇಖರ, ಹೊನ್ನೂರಪ್ಪ, ನಿರಂಜನ್, ದೇವಿಕಾ, ಸಂಗೀತ ಎಂದು ತಿಳಿದುಬಂದಿದೆ.

ರಾತ್ರಿ ಮಲಗುವ ಸಂದರ್ಭ ಗ್ಯಾಸ್ ಸಿಲಿಂಡರ್ ಆಫ್ ಮಾಡದೆ ಮಲಗಿದ್ದ ಕುಟುಂಬ ಈ ಸಂದರ್ಭ ಸಿಲಿಂಡರಿನಿಂದ ಗ್ಯಾಸ್ ಸೋರಿಕೆಯಾಗಿದೆ ಮುಂಜಾನೆ 4.30ಕ್ಕೆ ಎದ್ದು ಲೈಟ್ ಸ್ವಿಚ್ ಆನ್ ಮಾಡಿದಾಗ ಸಿಲಿಂಡರ್ ಸ್ಫೋಟಗೊಂಡಿದೆ, ಘಟನೆಯಲ್ಲಿ ನಾಲ್ವರು ಮಕ್ಕಳಿಗೆ ಗಂಭೀರ ಗಾಯವಾಗಿದ್ದು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲುಮಾಡಲಾಗಿದೆ.
ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment