Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದ 118ನೇ ಭಜನಾ ಸಪ್ತಾಹದ ಆಮoತ್ರಣ ಪತ್ರಿಕೆ ಬಿಡುಗಡೆ-ಅಗಸ್ಟ್ 16ರಿ೦ದ ಭಜನಾ ಸಪ್ತಾಹ ಆರoಭ

ಉತ್ತರ ಪ್ರದೇಶ: ಪತ್ರಕರ್ತನಿಗೆ ಗುಂಡಿಕ್ಕಿ ಹತ್ಯೆ

ಘಾಜಿಯಾಬಾದ್(ಉತ್ತರ ಪ್ರದೇಶ): ದುಷ್ಕರ್ಮಿಗಳ ಗುಂಡೇಟಿಗೆ ಪತ್ರಕರ್ತರೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ಸಂಭವಿಸಿದೆ.

ಹಿಂದಿ ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ಅನುಜ್ ಚೌಧರಿ ಎನ್ನುವವರ ಮನೆಗೆ ನುಗ್ಗಿದ ಆರೋಪಿಗಳು ಅನುಜ್ ಅವರ ಮೇಲೆ ಗುಂಡಿನ ಮಳೆಗರೆದಿದ್ದಾರೆ.

ದಾಳಿಗೊಳಗಾದ ಅನುಜ್ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೇ ಅವರು ಮರಣ ಹೊಂದಿದ್ದರು.

ವೈಯುಕ್ತಿಕ ದ್ವೇಷವೇ ಈ ಹತ್ಯೆಗೆ ಕಾರಣವೆಂದು ಪ್ರಾಥಮಿಕ ತನಿಖೆಯ ವೇಳೆ ತಿಳಿದಿರುವುದಾಗಿ ಪೋಲೀಸರು ಹೇಳಿದ್ದಾರೆ.

No Comments

Leave A Comment