Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ "ಚ೦ಡಿಕಾ ಹೋಮ " ಕಾರ್ಯಕ್ರಮವು 19-10-2018ರ೦ದು ಜರಗಲಿದೆ....

250 ಕೆ.ಜಿ. ಬಾದಾಮಿ ಜಪ್ತಿ ಬೆಳಗಾವಿ: ಆಟೊರಿಕ್ಷಾದಲ್ಲಿ ಸಾಗಿಸುತ್ತಿದ್ದ ದಾಖಲೆಯಿಲ್ಲದ ₹ 4 ಕೋಟಿ ನಗದು ವಶ

ಬೆಳಗಾವಿ: ಸಂಕೇಶ್ವರದಲ್ಲಿ ದಾಖಲೆಗಳಿಲ್ಲದೆ ಆಟೊರಿಕ್ಷಾದಲ್ಲಿ ಸಾಗಿಸುತ್ತಿದ್ದ ₹4 ಕೋಟಿ ನಗದನ್ನು ತೆರಿಗೆ ಅಧಿಕಾರಿಗಳು ಹಾಗೂ ಚುನಾವಣಾ ಸಿಬ್ಬಂದಿ ಗುರುವಾರ ತಡರಾತ್ರಿ ವಶಪಡಿಸಿಕೊಂಡಿದ್ದಾರೆ.

ಇನ್ನೊಂದು ವಾಹನದಲ್ಲಿ ಸಾಗಿಸುತ್ತಿದ್ದ ₹ 70 ಸಾವಿರ ಮೌಲ್ಯದ ಶರ್ಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಾಹನಗಳು, ನಗದು ಹಾಗೂ ಸರಕುಗಳನ್ನು ಸಂಕೇಶ್ವರ ಠಾಣೆ ಪೊಲೀಸ್ ಠಾಣೆಗೆ ನೀಡಲಾಗಿದೆ ಎಂದು ಬೆಳಗಾವಿ ವಿಭಾಗದ ಸರಕು ಹಾಗೂ ಸೇವಾ ತೆರಿಗೆ (ಜಾರಿ) ಜಂಟಿ ಆಯುಕ್ತ ರವಿ ಜೆ.ಸ್ಯಾಂಕ್ಟಸ್ ತಿಳಿಸಿದ್ದಾರೆ.

ದಾಖಲೆಗಳು ಇಲ್ಲದೆ ಇರುವುದರಿಂದ ವಾಹನವೊಂದರಲ್ಲಿ ಸಾಗಿಸುತ್ತಿದ್ದ  250 ಕೆ.ಜಿ. ಬಾದಾಮಿಯನ್ನು ಸಹ ಜಪ್ತಿ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

No Comments

Leave A Comment