Log In
BREAKING NEWS >
ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಲಖನೌ ಅತ್ಯಾಚಾರದ ಆರೋಪಿ ಬಿಜೆಪಿ ಶಾಸಕ ಕುಲದೀಪ್‌ ವಿಚಾರಣೆ ಆರಂಭಿಸಿದ ಸಿಬಿಐ

ಲಖನೌ(ಉತ್ತರ ಪ್ರದೇಶ): 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೆಂಗರ್‌ ಅವರನ್ನು ಸಿಬಿಐ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದೆ.

ಲಖನೌದಲ್ಲಿನ ಶಾಸಕರ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ 4 ಗಂಟೆಗೆ ತೆರಳಿದ ಸಿಬಿಐ ತಂಡ ಅವರನ್ನು ವಶಕ್ಕೆ ಪಡೆದು ಪ್ರಶ್ನಿಸುತ್ತಿದೆ. ಈ ಪ್ರಕರಣದ ಕುರಿತ ಎಲ್ಲ ದಾಖಲೆಗಳನ್ನು ಹಸ್ತಾಂತರಿಸುವಂತೆ ಸಿಬಿಐ ಉತ್ತರ ಪ್ರದೇಶದ ಪೊಲೀಸರಿಗೆ ಸೂಚಿಸಿದೆ.

ಸಂತ್ರಸ್ಥೆಯು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ನಿವಾಸದ ಮುಂದೆ ಕಳೆದ ಭಾನುವಾರ ಆತ್ಯಹತ್ಯೆಗೆ ಯತ್ನಿಸಿದ್ದಳು. ಆಕೆಯ ತಂದೆ ಪೊಲೀಸ್‌ ಕಸ್ಟಡಿಯಲ್ಲಿ ಇರುವಾಗಲೇ ಸೋಮವಾರ ಮೃತಪಟ್ಟಿದ್ದರು. ಹಾಗಾಗಿ ಈ ಉನ್ನಾವ್ ಅತ್ಯಾಚಾರ ಪ್ರಕರಣದ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.

No Comments

Leave A Comment