Log In
BREAKING NEWS >
ಅಗಸ್ಟ್ 16ರಿ೦ದ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ....

ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ 2 ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

ಹಾನಗಲ್ : ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪಿದ್ದು ಇಪ್ಪತೈದಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹಾನಗಲ್ ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ

ಘಟನೆಯಲ್ಲಿ ಮೃತರನ್ನು ಸಿರಸಿಯ ವಿಜಯಲಕ್ಷ್ಮಿ(45) ಹಾಗೂ ಗೀತಾ(50) ಎಂದು ತಿಳಿದುಬಂದಿದೆ., ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಮುಂಜಾನೆ ಖಾಸಗಿ ಬಸ್ಸೊಂದು ಬೆಂಗಳೂರಿನಿಂದ ಸಾಗರದ ಮಾರ್ಗವಾಗಿ ಸಾಗುತ್ತಿದ್ದ ಬಸ್ಸು ಹಾನಗಲ್ ಸಮೀಪ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ, ಪ್ರಯಾಣಿಕರು ನಿದ್ದೆಯ ಮಂಪರಿನಲ್ಲಿದ್ದರು ಎಂದು ತಿಳಿದುಬಂದಿದ್ದು ಸುಮಾರು ಇಪ್ಪತೈದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಕೂಡಲೆ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

No Comments

Leave A Comment