Log In
BREAKING NEWS >
ಕರಾವಳಿಯಲ್ಲಿ ಭಾರೀ ಮಳೆ-ಹಲವೆಡೆಯಲ್ಲಿ ನೆರೆ...ಜೂನ್ 22ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಅನುಗ್ರಹ ಲಕ್ಷ್ಮೀವೃತ ಕಾರ್ಯಕ್ರಮವು ಜರಗಲಿದೆ....

ಕರಾವಳಿಯಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಲಿದ್ದಾರೆ ಪ್ರಿಯಾಂಕಾ ವಾದ್ರಾ

ಮಂಗಳೂರು, ಏ 23: ವಿಧಾನಸಭಾ ಚುನಾವಣೆಯ ಹಿನ್ನಲೆ ಕಾಂಗ್ರೆಸ್ ಪರ ಪ್ರಚಾರ ನಡೆಸಲು ಪ್ರಿಯಾಂಕಾ ವಾದ್ರಾ ಕರಾವಳಿಗೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಸೋನಿಯಾ ಗಾಂಧಿ ಅನಾರೋಗ್ಯದ ಹಿನ್ನೆಲೆ, ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಬರಲು ಸಾಧ್ಯವಾಗದ ಕಾರಣ ಪ್ರಿಯಾಂಕಾ ವಾದ್ರಾ ಪ್ರಚಾರಕ್ಕೆ ಬರಲಿದ್ದಾರೆ. ಮೇ ತಿಂಗಳ ಮೊದಲ ವಾರದಲ್ಲಿ ರಾಜ್ಯಕ್ಕೆ ಆಗಮಿಸಲಿರುವ ಪ್ರಿಯಾಂಕಾ ವಾದ್ರಾ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರೋಡ್ ಶೋ, ಸಾರ್ವಜನಿಕ ಸಭೆ ನಡೆಸಿ ಒಂದು ಸುತ್ತಿನ ಪ್ರಚಾರ ಕಾರ್ಯ ನಡೆಸಿದ್ದಾರೆ. ಇದೀಗ ರಾಹುಲ್ ಗಾಂಧಿ ಮತ್ತೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ . ಕಳೆದ ಬಾರಿ ಮಂಗಳೂರಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಈ ಬಾರಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಬಿ. ರಮಾನಾಥ ರೈ ಪರ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 27 ರಂದು ಬಂಟ್ವಾಳಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ರೋಡ್ ಶೋ ಮೂಲಕ ಪ್ರಚಾರ ನಡೆಸಲಿದ್ದಾರೆ.

ಪ್ರಿಯಾಂಕ ವಾದ್ರಾ ಕರಾವಳಿಯಲ್ಲಿ ಪ್ರಚಾರ ನಡೆಸುವ ಕುರಿತು ಎಐಸಿಸಿಯಿಂದ ಈವರೆಗೆ ಯಾವುದೇ ಅಧಿಕೃತ ಮಾಹಿತಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಘಟಕಕ್ಕೆ ಬಂದಿಲ್ಲ. ಆದರೆ ಅವರು ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

No Comments

Leave A Comment