Log In
BREAKING NEWS >
ನಾಡಿನ ಸಮಸ್ತ ಜನತೆಗೆ, ನಮೆಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನಾಗರ ಪ೦ಚಮಿ ಹಾಗೂ ನೇ ಸ್ವಾತ೦ತ್ರೋತ್ಸವದ ಶುಭಾಶಯಗಳು....

ನೇರ ನೇಮಕವಾಗಲಿರುವ ಮೊದಲ ವಕೀಲೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ‘ಇಂದು ಮಲ್ಹೊತ್ರ’ ನೇಮಕಕ್ಕೆ ಸಮ್ಮತಿ

ನವದೆಹಲಿ: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಹಿರಿಯ ವಕೀಲೆ ‘ಇಂದು ಮಲ್ಹೊತ್ರ’ ಅವರನ್ನು ನೇಮಕ ಮಾಡುವ ಕೊಲಿಜಿಯಂ ಶಿಫಾರಸಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ.

ಇದರಿಂದಾಗಿ, ವಕೀಲಿ ವೃತ್ತಿಯಿಂದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ನೇರ ನೇಮಕವಾಗಲಿರುವ ಮೊದಲ ಮಹಿಳೆಯಾಗಲಿದ್ದಾರೆ ಮಲ್ಹೊತ್ರ. ಆದರೆ, ಉತ್ತರಾಖಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಕೆ.ಎಂ. ಜೋಸೆಫ್‌ ಅವರ ನೇಮಕವನ್ನು ಕೊಲಿಜಿಯಂ ತಡೆ ಹಿಡಿದಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಕೊಲಿಜಿಯಂ ಮಲ್ಹೊತ್ರ ಮತ್ತು ಜೋಸೆಫ್ ಅವರ ಹೆಸರನ್ನು ಜನವರಿಯಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಅದನ್ನು ಪರಿಶೀಲಿಸಿದ್ದ ಕಾನೂನು ಸಚಿವಾಲಯ ಮಲ್ಹೊತ್ರ ಅವರ ನೇಮಕಕ್ಕೆ ಮಾತ್ರ ಅನುಮತಿ ನೀಡಲು ನಿರ್ಧರಿಸಿತ್ತು.

ಜೋಸೆಫ್ ಅವರ ಹೆಸರನ್ನು ಶಿಫಾರಸು ಮಾಡುವಲ್ಲಿ ಕೊಲಿಜಿಯಂ ಸೇವಾ ಹಿರಿತನ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಕಡೆಗಣಿಸಿದೆ ಎಂಬುದು ಸರ್ಕಾರದ ವಾದ. ಹೈಕೋರ್ಟ್‌ನ 669 ನ್ಯಾಯಾಧೀಶರ ಪಟ್ಟಿಯಲ್ಲಿ ಜೋಸೆಫ್ ಅವರು 42ನೇ ಸ್ಥಾನದಲ್ಲಿದ್ದಾರೆ ಎನ್ನಲಾಗಿದೆ.

No Comments

Leave A Comment