Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ "ಚ೦ಡಿಕಾ ಹೋಮ " ಕಾರ್ಯಕ್ರಮವು 19-10-2018ರ೦ದು ಜರಗಲಿದೆ....

ತಿರುಪತಿಯಿಂದ ಮದುವೆ ಮುಗಿಸಿ ಹಿಂತಿರುಗುವಾಗ ಭೀಕರ ಅಪಘಾತ: ಒಂದೇ ಕುಟುಂಬದ 7 ಮಂದಿ ದಾರುಣ ಸಾವು

ಕಡಪ(ಆಂಧ್ರ): ತಿರುಪತಿಯಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂತಿರುಗುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಕುಟುಂಬದ 7 ಮಂದಿ ದಾರುಣ ಸಾವನ್ನಪ್ಪಿದ್ದಾರೆ.

ಆಂಧ್ರಪ್ರದೇಶದ ಕಡಪ ಜಿಲ್ಲೆಯ ಪುಲ್ಲಂಪೇಟ ಬಳಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಹಿಳೆಯರು ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದರೇ ಕಾರಿನ ಚಾಲಕ ಸೇರಿ ನಾಲ್ಕು ಮಂದಿಗೆ ಗಂಭೀರ ಗಾಯವಾಗಿದೆ.

ಮೃತರು ಅನಂತಪುರ ಜಿಲ್ಲೆಯ ಗುಂತಕ್ಕಲ್ ನವರು ಎಂದು ತಿಳಿದುಬಂದಿದೆ. ಮೃತರನ್ನು ಭಾಗ್ಯಲಕ್ಷ್ಮೀ, ಸರಸ್ವತಿ, ಗಾಯಿತ್ರಿ, ಗೌರಮ್ಮ ಎಂದು ಗುರುತಿಸಲಾಗಿದೆ. ಇವರೆಲ್ಲ ಅನಂತಪುರ ಜಿಲ್ಲೆಯ ಗುಂತಕ್ಕಲ್ ನಿವಾಸಿಗಳು ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ರಾಜಂಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

No Comments

Leave A Comment