Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಧರ್ಮಸ್ಥಳ: 131 ಜೋಡಿ ವಿವಾಹ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಭಾನುವಾರ ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 47ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.

ವೈದಿಕರ ಮಂಗಳ ವೇದಘೋಷ, ವಾದ್ಯಘೋಷಗಳ ನಡುವೆ ಶ್ರೀ ಕ್ಷೇತ್ರ 131 ಜೋಡಿ ವಧು-ವರರು ದಂಪತಿಗಳಾಗಿ ಗ್ರಹಸ್ಥಾಶ್ರಮಕ್ಕೆ ಕಾಲಿಟ್ಟರು. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಶ್ರೀ ಮಂಜುನಾಥಸ್ವಾಮಿಯ ಅನುಗ್ರಹದೊಂದಿಗೆ ನೂತನ ವಧು-ವರರು ಪ್ರಮಾಣ ವಚನ ಸ್ವೀಕರಿಸಿ, ಸತಿಪತಿಗಳಾದರು.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ಪ್ರಾರಂಭಿಸಿದ್ದು ಪ್ರತಿವರ್ಷ ಈ ಕಾರ್ಯಕ್ರಮ ನಡೆಯುತ್ತದೆ. ಈ ಬಾರಿ 47ನೇ ವರ್ಷವನ್ನು ಪೂರೈಸಿದ್ದು, ಇದುವರೆಗೆ ಒಟ್ಟು 12,260 ಜೋಡಿ ಶ್ರೀ ಮಂಜುನಾಥಸ್ವಾಮಿಯ ಸನ್ನಿಧಿಯಲ್ಲಿ ದಾಂಪತ್ಯ ಜೀವನ ಆರಂಭಿಸಿದ್ದಾರೆ.

ಭಾನುವಾರ ಸಂಜೆ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಬಳಿಯಿಂದ ಅಮೃತ ವರ್ಷಿಣಿ ಸಭಾಭವನದವರೆಗೆ ಮೆರವಣಿಗೆಯಲ್ಲಿ ಗಣ್ಯರನ್ನು ಹಾಗೂ ವಧು-ವರರನ್ನು ಕರೆತರಲಾಯಿತು. ನಾಡಿನ ಮೂಲೆ ಮೂಲೆಯಿಂದ ಕ್ಷೇತ್ರಕ್ಕೆ ಆಗಮಿಸಿದ ಸಾವಿರಾರು ಭಕ್ತರು ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡರು.

ವಧು-ವರರಿಂದ ಪ್ರಮಾಣ ವಚನ 

ಶ್ರೀ ಕ್ಷೇತ್ರದಲ್ಲಿ ಇಂದು ಮಂಗಲ ಮುಹೂರ್ತದಲ್ಲಿ ವಧೂ-ವರರಾಗಿ ಪವಿತ್ರ ಬಾಂಧವ್ಯವನ್ನು ಹೊಂದಿರುವ ನಾವು ಮುಂದೆ ಜೀವನದುದ್ದಕ್ಕೂ ಧರ್ಮ, ಅರ್ಥ, ಕಾಮಗಳಲ್ಲಿ ಸಹಚರರಾಗಿ ಪರಸ್ಪರ ಪ್ರೀತಿ-ವಿಶ್ವಾಸದಿಂದ ಒಬ್ಬರಿಗೊಬ್ಬರು ವಂಚನೆ ಮಾಡದೆ ಹಾಗೂ ಯಾವೂದೇ ದುರಭ್ಯಾಸಗಳಿಗೆ ತುತ್ತಾಗದೆ ಬದುಕುತ್ತೇವೆ ಎಂಬುದಾಗಿ ಭಗವಾನ್‌ ಶ್ರೀ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಮತ್ತು ಪೂಜ್ಯ ಹೆಗ್ಗಡೆಯವರ ಸಮಕ್ಷ ಮದಲ್ಲಿ ಪ್ರಮಾಣವಚನ ಬದ್ಧರಾಗುತ್ತಿದ್ದೇವೆ.

No Comments

Leave A Comment