Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ "ಚ೦ಡಿಕಾ ಹೋಮ " ಕಾರ್ಯಕ್ರಮವು 19-10-2018ರ೦ದು ಜರಗಲಿದೆ....

ಶಿರಸಿ ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣ ನಾಯ್ಕಗೆ ಐಟಿ ಶಾಕ್‌ !

ಶಿರಸಿ: ಶಿರಸಿ-ಸಿದ್ದಾಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣ ನಾಯ್ಕ ಅವರ ನಿವಾಸದ ಮೇಲೆ ಮಂಗಳವಾರ ರಾತ್ರಿ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಅಯ್ಯಪ್ಪನಗರದಲ್ಲಿರುವ ನಿವಾಸಕ್ಕೆ ದಾಳಿ ನಡೆಸಿರುವ 8 ಕ್ಕೂ ಹೆಚ್ಚು ಅಧಿಕಾರಿಗಳು ಭೀಮಣ್ಣ ನಾಯ್ಕ ಸಮಕ್ಷಮದಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬುಧವಾರ ಬೆಳಗ್ಗೆಯೂ ಪರಿಶೀಲನೆ ಮುಂದುವರಿದಿರುವುದಾಗಿ ವರದಿಯಾಗಿದೆ.

ಐಟಿ ದಾಳಿ ವಿರುದ್ದ ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರು ಸಾಮಾಜಿಕ ತಾಣಗಳಲ್ಲಿ  ಕಿಡಿ ಕಾರಿದ್ದು , ಶಿರಸಿ ಕ್ಷೇತ್ರದಲ್ಲಿ ಸೋಲಿನ ಭೀತಿಯಿಂದ ಬಿಜೆಪಿ ಈ ಕೆಲಸ ಮಾಡಿದೆ ಎಂದಿದ್ದಾರೆ.

ಶಿರಸಿಯಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ  ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಜೆಡಿಎಸ್‌ನ ಶಶಿಭೂಷಣ ಹೆಗಡೆ ಮತ್ತು ಭೀಮಣ್ಣ ನಾಯ್ಕ ಅವರ ನಡೆವೆ ಜಿದ್ದಾಜಿದ್ದಿನ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

No Comments

Leave A Comment