Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

4 ರಾಜ್ಯಗಳಿಗೆ ಚಂಡಮಾರುತ, ಬಿರುಗಾಳಿ ಸಹಿತ ಮಳೆ ಎಚ್ಚರಿಕೆ ನೀಡಿದ ಕೇಂದ್ರ

ನವದೆಹಲಿ: ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಗೆ ನೂರಾರು ಜನ ಪ್ರಾಣ ಕಳೆದುಕೊಂಡಿರುವ ಬೆನ್ನಲ್ಲೇ , ಮತ್ತೆ ನಾಲ್ಕು ರಾಜ್ಯಗಳಲ್ಲಿ ಚಂಡಮಾರುತ ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಎಚ್ಚರಿಕೆ ನೀಡಿದೆ.
ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಚಂಡಮಾರುತ, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಗೃಹ ಸಚಿವಾಲಯ ಎಚ್ಚರಿಕೆ ನೀಡಿದೆ.
ಕಳೆದ ಎರಡು ದಿನಗಳಲ್ಲಿ ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಐದು ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಮಳೆಗೆ 124 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಉತ್ತರ ಪ್ರದೇಶದಲ್ಲಿ 73 ಮಂದಿ ಮೃತಪಟ್ಟಿದ್ದಾರೆ ಮತ್ತು 91 ಮಂದಿ ಗಾಯಗೊಂಡಿದ್ದಾರೆ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ರಾಜಸ್ಥಾನದಲ್ಲಿ 35 ಮಂದಿ, ತೆಲಂಗಾಣದಲ್ಲಿ 8, ಉತ್ತರಾಖಂಡದಲ್ಲಿ 6 ಹಾಗೂ ಪಂಜಾಬ್ ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಚಂಡಮಾರುತದಿಂದಾಗಿ ಹಲವು ಪ್ರದೇಶದಲ್ಲಿ ವಿದ್ಯುತ್ ಕಡಿತಗೊಂಡಿದ್ದು, ಕನಿಷ್ಠ 12 ಸಾವಿರ ವಿದ್ಯುತ್ ಕಂಬಗಳು ಧರೆಗುರುಳಿವೆ. ಅಲ್ಲದೆ 2500 ಟಾರ್ನ್ಸ್ ಫಾರ್ಮರ್ ಗಳು ಸುಟ್ಟು ಹೋಗಿವೆ ಎಂದು ಅವರು ತಿಳಿಸಿದ್ದಾರೆ.
ರಾಜಸ್ಥಾನದಲ್ಲಿ ಭರತ್ ಪುರ ಹಾಗೂ ಉತ್ತರ ಪ್ರದೇಶದಲ್ಲಿ ಆಗ್ರಾ ಜಿಲ್ಲೆಗಳು ಅತಿ ಹೆಚ್ಚಿನ ಹಾನಿಗೆ ಗುರಿಯಾಗಿವೆ. ಸಾವಿರಾರು ಮರ ಮತ್ತು ವಿದ್ಯುತ್‌ ಕಂಬಗಳು ಧರೆಗುರುಳಿದ್ದರಿಂದ ಮೂರೂ ರಾಜ್ಯಗಳ ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರೈಲು, ಬಸ್‌ ಸಂಚಾರ, ಸರ್ಕಾರಿ ಹಾಗೂ ಖಾಸಗಿ ಕಂಪನಿಗಳ ದೈನಂದಿನ ಸೇವೆಗಳೂ ವ್ಯತ್ಯಯವಾಗಿವೆ. ಜತೆಗೆ ಹಲವು ನಗರಗಳಲ್ಲಿ ದಿನವಿಡೀ ಧೂಳು ಮಿಶ್ರಿತ ಬಿರುಸಿನ ಗಾಳಿ ಬೀಸಿದ್ದರಿಂದ ದೈನಂದಿನ ವಹಿವಾಟಿಟು ಭಾಗಶಃ ಸ್ಥಗಿತಗೊಂಡಿದೆ.
No Comments

Leave A Comment