Log In
BREAKING NEWS >
ಅಗಸ್ಟ್ 16ರಿ೦ದ ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ....

ಬೆಂಗಳೂರು ಬಿಜೆಪಿ ಶಾಸಕ ವಿಜಯಕುಮಾರ್‌ ಇನ್ನಿಲ್ಲ

ಬೆಂಗಳೂರು: ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಹಾಲಿ ಅಭ್ಯರ್ಥಿ ಬಿ.ಎನ್‌. ವಿಜಯ ಕುಮಾರ್‌ (60) ಶುಕ್ರವಾರ (ಮೇ 3) ರಾತ್ರಿ 1 ಗಂಟೆಗೆ ನಿಧನರಾದರು. ಹೀಗಾಗಿ, ಇದೇ 12 ರಂದು ನಡೆಯಬೇಕಾಗಿದ್ದ ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ.

ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ವಿಜಯ ಕುಮಾರ್‌, ಗುರುವಾರ ಚುನಾವಣಾ ಪ್ರಚಾರ ಮಾಡುತ್ತಿದ್ದಾಗಲೇ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಯಿತು.

2008 ಮತ್ತು 2013 ರ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಅವರು ಆಯ್ಕೆಯಾಗಿದ್ದರು. ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆ
ಯಲ್ಲಿದ್ದ ಅವರು ಅನಾರೋಗ್ಯದ ನಡುವೆಯೂ ಪ್ರಚಾರಕ್ಕೆ ಇಳಿದಿದ್ದರು. ಇತ್ತೀಚೆಗೆ ಅವರ ಹೃದಯದ ನಾಳಕ್ಕೆ ಸ್ಟೆಂಟ್‌ ಅಳವಡಿಸಲಾಗಿತ್ತು. ಹೆಚ್ಚು ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದರು ಎಂದು ಮೂಲಗಳು ತಿಳಿಸಿವೆ.

No Comments

Leave A Comment