Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

3ನೇ ಬಾರಿ ಸಿಎಂ; ಬಿ ಎಸ್ ಯಡಿಯೂರಪ್ಪ ಎಂಬ ಹೆಸರಿನವನಾದ ನಾನು…ಪ್ರಮಾಣವಚನ

ಬೆಂಗಳೂರು:ಪದಗ್ರಹಣ ಸಮಾರಂಭಕ್ಕೆ ತಡೆನೀಡಬೇಕೆಂಬ ಕಾಂಗ್ರೆಸ್, ಜೆಡಿಎಸ್ ಮನವಿಯನ್ನು ನಸುಕಿನ ಜಾವ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ನಕಾರ ವ್ಯಕ್ತಪಡಿಸಿದ್ದು, ಏತನ್ಮಧ್ಯೆ ಬಿಎಸ್ ಯಡಿಯೂರಪ್ಪ ನಿಗದಿಯಂತೆ ಗುರುವಾರ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಮತ್ತು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜ್ಯಪಾಲ ವಜೂಭಾಯ್ ವಾಲಾ ಬಿಎಸ್ ಯಡಿಯೂರಪ್ಪನವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬಿಎಸ್ ವೈ ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ರಾಜಭವನದ ಗಾಜಿನಮನೆಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಮಿಥುನಲಗ್ನದಲ್ಲಿ ಹಸಿರು ಶಾಲು ಹೊದ್ದು, ಬಿಳಿ ಬಣ್ಣದ ಸಫಾರಿ ಡ್ರೆಸ್ ನಲ್ಲಿ ಆಗಮಿಸಿದ್ದ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಮಕೃಷ್ಣ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಬಿಎಸ್ ಯಡಿಯೂರಪ್ಪ ರಾಜಭವನಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರು, ಶಾಸಕರು ಯಡಿಯೂರಪ್ಪನವರಿಗೆ ಶುಭಾಶಯ ಕೋರಿದರು.

ಬಿಎಸ್ ವೈ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ನೆರೆದಿದ್ದ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು, ಮೋದಿ, ಮೋದಿ ಎಂದು ಹರ್ಷೋದ್ಘಾರ ವ್ಯಕ್ತಪಡಿಸಿದರು.

No Comments

Leave A Comment