Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ನರೇಂದ್ರಮೋದಿ ನೇತೃತ್ವದ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ- ಹೆಚ್. ಡಿ. ಕುಮಾರಸ್ವಾಮಿ

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಸರ್ಕಾರ ರಾಜಭವನವನ್ನು ದುರುಪಯೋಗ ಮಾಡಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಅಸಂವಿಧಾನಿಕ ನಿರ್ಧಾರ ಕೈಗೊಂಡಿದ್ದಾರೆ. ಬಹುಮತ ಇಲ್ಲದಿದ್ದರೂ ಬಹುಮತ ಸಾಬೀತು ಪಡಿಸಲು ಬಿಜೆಪಿ 15 ದಿನಗಳ ಕಾಲಾವಕಾಶ ನೀಡಲಾಗಿದೆ.

ಸ್ವಚ್ಛ ಭಾರತ ಮಾಡುವುದಾಗಿ ಹೇಳುತ್ತಿರುವ ನರೇಂದ್ರಮೋದಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹಾಳು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು  ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ವಿರುದ್ಧ ಬೆದರಿಕೆಯ ತಂತ್ರ ಹೂಡುತ್ತಿದೆ. 

ಇಡಿ ಮೂಲಕ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರನ್ನು ಹೆದರಿಸಿ ಬಿಜೆಪಿಗೆ ಬೆಂಬಲ ನೀಡುವಂತೆ ಒತ್ತಾಯಿಸಲಾಗಿದೆ. ಆನಂದ್ ಸಿಂಗ್ ಅವರೊಂದಿಗೆ ಈ ವಿಚಾರ ಕುರಿತಂತೆ ಮಾತುಕತೆ ನಡೆಸಿರುವುದಾಗಿ ಅವರು ಹೇಳಿದರು. ಬಿಜೆಪಿ ದಮನಕಾರಿ ನೀತಿಯನ್ನು ಖಂಡಿಸಲು ರಾಷ್ಟ್ರದ ಎಲ್ಲಾ ವಿರೋಧಪಕ್ಷಗಳ ನಾಯಕರು ಹಾಗೂ ಕಾರ್ಯಕರ್ತರು ಕೈಜೋಡಿಸುವಂತೆ ಕುಮಾರಸ್ವಾಮಿ ಮನವಿ ಮಾಡಿಕೊಂಡರು.

ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, ಮಾಯಾವತಿ, ರಾಜಾ ಸೇರಿದಂತೆ ಎಲ್ಲಾ ರಾಷ್ಟ್ರಮಟ್ಟದ ನಾಯಕರು ದೇಶದ ಹಿತದೃಷ್ಟಿಯಿಂದ ಒಗ್ಗೂಡಿ ಹೋರಾಟ ನಡೆಸುವ ಮೂಲಕ  ದೇಶದ ವ್ಯವಸ್ಥೆಯನ್ನು ರಕ್ಷಿಸಬೇಕೆಂದು ಕುಮಾರಸ್ವಾಮಿ ಒತ್ತಾಯಿಸಿದರು.

No Comments

Leave A Comment