Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಆಡುಗೋಡಿ ಠಾಣಾ ಎಎಸ್ಐ ನೇಣಿಗೆ ಶರಣು

ಬೆಂಗಳೂರು : ಆಡುಗೋಡಿ ಪೊಲೀಸ್ ಠಾಣೆಯ ಎಎಸ್ಐ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಡುಗೋಡಿ ಪೊಲೀಸ್ ಕ್ವಾಟ್ರಸ್ ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.

ಆಡುಗೋಡಿ ಠಾಣೆಯ ಸಿಎಆರ್ ವಿಭಾಗದ ಎಎಸ್ಐ ದಯಾನಂದ್ (46) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ, ಕಳೆದ ನಾಲ್ಕು ತಿಂಗಳಿನಿಂದ ಪುತ್ರ ಕಾಣೆಯಾಗಿದ್ದು ಮಗನ ಸುಳಿವು ಸಿಗದ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಶನಿವಾರ ತಡರಾತ್ರಿ ಆಡುಗೋಡಿ ಪೊಲೀಸ್ ಕ್ವಾಟ್ರಸ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಮೃತದೇಹವನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದೆ.

ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment