Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

746 ಕೋಟಿ ಸಂಗ್ರಹ: ಅಮಿತ್ ಶಾ ನಿರ್ದೇಶಕರಾಗಿರುವ ಸಹಕಾರಿ ಬ್ಯಾಂಕ್ ವಿರುದ್ಧ ತನಿಖೆಗೆ ಕಾಂಗ್ರೆಸ್ ಆಗ್ರಹ

ನವದೆಹಲಿ: ನೋಟ್ ಬ್ಯಾನ್ ನಂತರ ಅತೀ ಹೆಚ್ಚು ಹಳೆ ನೋಟುಗಳು ಜಮೆಯಾಗಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ನಿರ್ದೇಶಕರಾಗಿರುವ ಅಹಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್(ಎಡಿಸಿಬಿ) ವಿರುದ್ಧ ತನಿಖೆ ನಡೆಸಬೇಕು ಎಂದು ಶುಕ್ರವಾರ ಕಾಂಗ್ರೆಸ್ ಒತ್ತಾಯಿಸಿದೆ.
‘ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಮುಂದೆ ಬಂದು ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಉತ್ತರ ನೀಡಬೇಕು. 746 ಕೋಟಿ ರುಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆಯಾಗಬೇಕು’ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲ ಅವರು ಆಗ್ರಹಿಸಿದ್ದಾರೆ.
ಕಪ್ಪು ಕುಳಗಳಿಗೆ ಲಾಭ ಮಾಡಿಕೊಡುವುದಕ್ಕಾಗಿಯೇ ಪ್ರಧಾನಿ ಮೋದಿ ಅವರು ನೋಟ್ ಅಮಾನ್ಯೀಕರಣ ಮಾಡಿದ್ದು, ಸಹಕಾರಿ ಬ್ಯಾಂಕ್ ಮೂಲಕ ಕಪ್ಪು ಹಣವನ್ನು ಬಿಳಿ ಮಾಡಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಐದು ದಿನದಲ್ಲಿ 750 ಕೋಟಿ ರುಪಾಯಿ ಹಳೆ ನೋಟು ವಿನಿಮಯ ಮಾಡುವ ಮೂಲಕ ಮೊದಲ ಸ್ಥಾನ ಪಡೆದ ಅಹಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಅಮಿತ್ ಶಾಜಿ ಅವರಿಗೆ ಅಭಿನಂದನೆಗಳು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.
ಈ ಮಧ್ಯೆ, ನೋಟ್ ನಿಷೇಧದ ನಂತರ ಅಹಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್ ನ ಒಟ್ಟು 1.60 ಲಕ್ಷ ಗ್ರಾಹಕರು 746 ಕೋಟಿ ರುಪಾಯಿ ಜಮೆ/ವಿನಿಮಯ ಮಾಡಿಕೊಂಡಿದ್ದಾರೆ. ಇದು ಒಟ್ಟು ಜಮೆಯ ಶೇ.15ರಷ್ಟಿದೆ ಎಂದು ನಬಾರ್ಡ್ ಪ್ರಕಟಣೆಯಲ್ಲಿ ತಿಳಿಸಿದೆ.
Comments

Leave A Comment