Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಶರತ್ ಮಡಿವಾಳ ಹತ್ಯೆ: ಆರೋಪಿ ಮಹಮದ್ ಷರೀಫ್ ಗೆ ಹೈಕೋರ್ಟ್ ಜಾಮೀನು

ಬೆಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತನಾಗಿದ್ದ ಶರತ್ ಮ್ನಡಿವಾಳ ಹತ್ಯೆಯ ಪ್ರಮುಖ ಆರೋಪಿ ಮಹಮದ್ ಷರೀಫ್ ಗೆ ಹೈಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ.
ನ್ಯಾಯಮೂರ್ತಿಗಳಾದ ಜಾನ್ ಮೈಕಲ್ ಕುನ್ಮಾ ಅವರನ್ನೊಳಗೊಂಡ ಏಕಸದಸ್ಯ ಪೀಠ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ. 2 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ ಸೇರಿದಂತೆ ಇನ್ನಿತರೆ ಷರತ್ತುಗಳ ಮೇಲೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ವರದಿಯಾಗಿದೆ.
ಆರೊಪಿಗಳ ವಿರುದ್ಧ ಸಮರ್ಪಕ ಸಾಕ್ಷಾಧಾರ ಸಂಗ್ರಹಣೆ ಮಾಡುವಲ್ಲಿ ಪೋಲೀಸರು ವಿಫಲರಾಗಿದ್ದಾರೆ ಎಂದು ಅಭಿಪ್ರಾಯ ಪಟ್ಟ ನ್ಯಾಯಾಲಯ ಹತ್ಯೆ ನಡೆದು 10 ದಿನದ ಬಳಿಕ ಸಾಕ್ಷಿಗಳ ಹೇಳಿಕೆ ಪಡೆಯಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಕಳೆದ ವರ್ಷ ಜುಲೈ 4ರಂದು ಬಂಟ್ವಾಳದ ಬಿಸಿ ರೋಡ್ ಬಳಿ ತನ್ನ ಲಾಂಡ್ರಿ ಅಂಗಡಿಯಲ್ಲಿದ್ದ ಶರತ್ ಮಡಿವಾಳ  ಅವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶರತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.
No Comments

Leave A Comment