Log In
BREAKING NEWS >
ಜಮ್ಮು: ವೇಗವಾಗಿ ಸಾಗುತ್ತಿದ್ದ ಎಸ್‌ಯುವಿ ವಾಹನವೊಂದು ಆಯ ತಪ್ಪಿ ಕಮರಿಗೆ ಬಿದ್ದ ಪರಿಣಾಮ ಅದರಲ್ಲಿದ್ದ ನಾಲ್ವರು ಮಹಿಳೆಯರು, ಐವರು ಮಕ್ಕಳು ಸೇರಿ 11 ಮಂದಿ ಸಾವಿಗೀಡಾಗಿದ್ದಾರೆ.... 48 ಗಂಟೆಗೆ ಮುನ್ನ ಪ್ರಣಾಳಿಕೆ ಬೇಡ: ಆಯೋಗ...

ಮಳೆಗೆ ಉತ್ತರಾಖಂಡ ತತ್ತರ,ಕೊಚ್ಚಿ ಹೋದ ಸೇತುವೆಗಳು;7ಕ್ಕೂ ಹೆಚ್ಚು ಬಲಿ

ಡೆಹರಾಡೂನ್‌ : ಭಾರೀ ಮಳೆಗೆ ಉತ್ತಾರಖಂಡ ತತ್ತರಿಸಿ ಹೋಗಿದ್ದು, ಹಲವೆಡೆ ಸೇತುವೆಗಳು ನೆರೆ ನೀರಿನಲ್ಲಿ ಕೊಚ್ಚಿ ಹೋಗಿವೆ,7 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಕಳೆದ 2 ದಿನಗಳಲ್ಲಿ ರಾಜ್ಯದಲ್ಲಿ ಕುಂಭದ್ರೋಣ ಮಳೆ ಸುರಿಯುತ್ತಿದ್ದು, ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ.

ಡೆಹಾರೂಡ್‌ನ‌ನಲ್ಲಿ ಬೃಹತ್‌ ಕಟ್ಟಡವೇ ಕುಸಿದು ಬಿದ್ದಿದ್ದು, ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಹೆದ್ದಾರಿಗಳಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಅವರು ಅಧಿಕಾರಿಗಳ ರಜೆಗಳನ್ನು ರದ್ದು ಮಾಡಿ ಎಲ್ಲಾ ರೀತಿಯಲ್ಲಿ ಸಜ್ಜಾಗಲು ಮುನ್ಸೂಚನೆ ನೀಡಿದ್ದು ಹೈ ಅಲರ್ಟ್‌ ಘೋಷಿಸಲಾಗಿದೆ.

ವಾಯುಪಡೆ, ನೌಕಾಪಡೆ, ಭೂ ಸೇನೆ ಮತ್ತು ಎನ್‌ಡಿಆರ್‌ಎಫ್ ಪಡೆಗಳು ರಕ್ಷಣಾ ಕಾರ್ಯಕ್ಕೆ ಸರ್ವ ಸನ್ನದ್ಧವಾಗಿದ್ದು, ಈಗಾಗಲೇ ಕೆಲವೆಡೆ ಜನರನ್ನು ರಕ್ಷಿಸಿವೆ.

No Comments

Leave A Comment