Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಭಾರತೀಯ ವಾಯುಪಡೆಯ ಮಿಗ್ 21 ವಿಮಾನ ಪತನ, ಪೈಲಟ್ ಸಾವು

ನವದೆಹಲಿ: ಪಂಜಾಬ್ ನ ಪಠಾಣ್ ಕೋಟ್ ವಾಯುನೆಲೆಯಿಂದ ಹೊರಟಿದ್ದ ಭಾರತೀಯ ವಾಯು ಪಡೆಯ ಫೈಟರ್ ಜೆಟ್ ಮಿಗ್ 21 ವಿಮಾನ ಪತನಗೊಂಡ ಘಟನೆ ಬುಧವಾರ ಹಿಮಾಚಲಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ನಡೆದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಪೈಲಟ್ ಸಾವಿಗೀಡಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಘಟನೆ ಸಂಭವಿಸಿದ್ದ ಪಟ್ಟಾ ಜಾಟಿಯಾನ್ ಹಳ್ಳಿಯತ್ತ ರಕ್ಷಣಾ ತಂಡ ದೌಡಾಯಿಸಿರುವುದಾಗಿ ವರದಿ ವಿವರಿಸಿದೆ.

ಇತ್ತೀಚೆಗಷ್ಟೇ ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಸಂಭವಿಸಿದ್ದ ಭಾರತೀಯ ವಾಯುಪಡೆಯ ಮಿಗ್ 21 ಜೆಟ್ ಪತನದಲ್ಲಿ ಪೈಲಟ್ ಸಾವಿಗೀಡಾಗಿದ್ದರು.

No Comments

Leave A Comment