Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಬೀಜಿಂಗ್: ಅಮೆರಿಕಾ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟ

ಬೀಜಿಂಗ್: ಚೀನಾ ರಾಷ್ಟ್ರದ ರಾಜಧಾನಿ ಬೀಜಿಂಗ್ ನಲ್ಲಿರುವ ಅಮೆರಿಕಾ ರಾಯಭಾರಿ ಕಚೇರಿ ಸಮೀಪ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿರುವುದಾಗಿ ವರದಿಗಳು ತಿಳಿಸಿವೆ.
ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ರಾಯಭಾರಿ ಕಚೇರಿ ಬಳಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ.
ಅಮೆರಿಕಾ ರಾಯಭಾರಿ ಕಚೇರಿ ಸಮೀಪವೇ ಭಾರತೀಯ ರಾಯಭಾರಿ ಕಚೇರಿ ಕೂಡ ಇದ್ದು, ಭಾರತೀಯ ರಾಯಭಾರಿ ಕಚೇರಿಯಲ್ಲಿದ್ದವರೆಲ್ಲರೂ ಕ್ಷೇಮವಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಂಬ್ ಸ್ಫೋಟ ಸಂಭವಿಸಿದ ಸ್ಥಳದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವಿಡಿಯೋದಲ್ಲಿರುವ ಪ್ರಕಾರ, ಸ್ಥಳದ ಸುತ್ತಲೂ ದಟ್ಟ ಕಪ್ಪು ಹೊಗೆ ಆವರಿಸಿರುವುದು ಕಂಡು ಬಂದಿದೆ. ಸ್ಥಳದಲ್ಲಿ ಭದ್ರತಾ ಪಡೆಗಳು ಹಾಗೂ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಸ್ಥಳದಲ್ಲಿದ್ದ ಪ್ರತ್ಯದರ್ಶಿಗಳು ಮಾಹಿತಿ ನೀಡಿದ್ದು, ಸ್ಫೋಟ ಸಂಭವಿಸಿರುವುದಾಗಿ ದೃಢಪಡಿಸಿದ್ದಾರೆ.
ವೀಸಾ ಸಂದರ್ಶನಕ್ಕಾಗಿ ಅಮೆರಿಕಾ ರಾಯಭಾರಿ ಕಚೇರಿಯ ಹೊರಗೆ ಹಲವಾರು ಚೀನಾ ರಾಷ್ಟ್ರದ ಪ್ರಜೆಗಳು ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಲು ಅಮೆರಿಕಾ ರಾಯಭಾರಿ ಕಚೇರಿ ನಿರಾಕರಿಸಿದೆ.
ಸ್ಫೋಟ ಸಂಭವಿಸಿದ ಸ್ಥಳವು ಬೀಜಿಂಗ್ ಹೊರವಲಯದಲ್ಲಿದ್ದು, ಇಲ್ಲಿ ಭಾರತ ಸೇರಿ ಅನೇಕ ರಾಷ್ಟ್ರಗಳ ರಾಯಭಾರಿ ಕಚೇರಿಗಳೂ ಕೂಡ ಇವೆ.
No Comments

Leave A Comment