Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮುಂದುವರಿಸಿರುವ ರಾಜ್ಯ ಸರ್ಕಾರ ಭಾನುವಾರ ಮತ್ತೆ ಎಂಟು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಈ ಪೈಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಸೇರಿದಂತೆ ಆರು ಜಿಲ್ಲಾಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿದೆ. ವರ್ಗಾವಣೆಗೊಂಡು ಹೊಸ ಸ್ಥಳಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳ ವಿವರ ಹೀಗಿದೆ.

ಎಸ್‌.ಪಾಲಯ್ಯ- ಕಾರ್ಮಿಕ ಆಯುಕ್ತರು; ಜೆ.ಮಂಜುನಾಥ್‌-ಕೋಲಾರ ಜಿಲ್ಲಾಧಿಕಾರಿ; ಎಂ.ಕುರ್ಮಾ ರಾವ್‌- ಯಾದಗಿರಿ ಜಿಲ್ಲಾಧಿಕಾರಿ; ಅನಿರುದ್ಧ್ ಸ್ರವನ್‌- ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ; ಡಾ.ಕೆ.ರಾಕೇಶ್‌ ಕುಮಾರ್‌- ತುಮಕೂರು ಜಿಲ್ಲಾಧಿಕಾರಿ; ಮೊಹಮ್ಮದ್‌ ರೋಷನ್‌- ಉತ್ತರ ಕನ್ನಡ ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ-2 ಮತ್ತು ಹೆಚ್ಚುವರಿಯಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆ; ಡಾ.ಎನ್‌.ಶಿವಶಂಕರ- ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಯನಿರ್ವಾಹಕ ಸದಸ್ಯ, ಬೆಂಗಳೂರು; ಕರೀಗೌಡ- ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ.

ಇದಲ್ಲದೆ, ಕೆಎಸ್‌ಆರ್‌ಟಿಸಿ ನಿರ್ದೇಶಕ (ಆಡಳಿತ ಮತ್ತು ಪರಿಸರ) ಕೆ.ಶ್ರೀನಿವಾಸ್‌ ಅವರನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಆಯುಕ್ತರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

No Comments

Leave A Comment