Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ನಾನು ಪ್ರಧಾನಿಯಾಗಲು ಕರುಣಾನಿಧಿ ಪಾತ್ರವಿತ್ತು: ಕಾವೇರಿ ಆಸ್ಪತ್ರೆ ಭೇಟಿ ಬಳಿಕ ದೇವೇಗೌಡ

ಚೆನ್ನೈ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಶುಕ್ರವಾರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ಕರುಣಾನಿಧಿ ಪುತ್ರ ಎಂ.ಕೆ. ಸ್ಟಾಲಿನ್‌ ಮತ್ತು ಪುತ್ರಿ ಕನಿಮೋಳಿ ಅವರೊಂದಿಗೆ ಮಾತುಕತೆ ನಡೆಸಿ ಡಿಎಂಕೆ ಮುಖ್ಯಸ್ಥನ ಆರೋಗ್ಯ ಕುರಿತು ಮಾಹಿತಿ ಪಡೆದರು. ಬಳಿಕ  ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ, 1996ರಲ್ಲಿ ತಾವು ಪ್ರಧಾನಿಯಾಗಲು ಕರುಣಾನಿಧಿ ಅವರ ಪಾತ್ರವಿತ್ತು ಎಂದು ಸ್ಮರಿಸಿದರು.
ನಾನು ಪ್ರಧಾನಿಯಾಗಲು ಕರುಣಾನಿಧಿ ಸಹ ಕಾರಣ. ಅದನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ.
ಐದು ಅವಧಿಗೆ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಕರುಣಾನಿಧಿ ಅವರ ಸೇವೆಯನ್ನು ಶ್ಲಾಘಿಸಿದ ಮಾಜಿ ಪ್ರಧಾನಿ, ಕೇಂದ್ರದಲ್ಲಿ ಸ್ಥಿರ ಸಮಿಶ್ರ ಸರ್ಕಾರ ನೀಡಲು ಪ್ರಮುಖ ಪಾತ್ರ ವಹಿಸಿದ್ದರು. ಕೇಂದ್ರದ ಎಲ್ಲಾ ಸಮ್ಮಿಶ್ರ ಸರ್ಕಾರಗಳು ಅವರ ಬೆಂಬಲ ಪಡೆದಿವೆ ಎಂದರು.
No Comments

Leave A Comment