Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಕೊಕ್ಕಡ ಭೀಕರ ರಸ್ತೆ ಅಪಘಾತ ಇಬ್ಬರು ಸಾವು

ಉಪ್ಪಿನಂಗಡಿ : ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಕೊಕ್ಕಡ ಸಮೀಪ ಕೌಕ್ರಾಡಿ ಗ್ರಾಮದ ಪಾರ್ಪಿಕಲ್ಲು ಬಳಿಯಾ ತಿರುವಿನಲ್ಲಿ ರವಿವಾರ ರಾತ್ರಿ ಸಂಭವಿಸಿದೆ.

ಘಟನೆಯಲ್ಲಿ ಮೃತಪಟ್ಟವರು ಧರ್ಮಸ್ಥಳದ ಮುಳಿಕ್ಕಾರು ಮನೆ ವೀರಪ್ಪ ಮಲೆಕುಡಿಯರವರ ಪುತ್ರ ದಿನೇಶ್ (32) ಹಾಗೂ ಧರ್ಮಸ್ಥಳದ ಸಂದು ಲೈಟಿಂಗ್ಸ್ ನ ಮಾಲಕ ಸಂದೇಶ್(30) ಎಂದು ತಿಳಿದುಬಂದಿದೆ.

ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸಿಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಸ್ಥಳೀಯ ಯುವಕರಾದ ಶರೀಫ್ ಬೋಳದ ಬೈಲು, ಖಲಂದರ್ ಕೊಕ್ಕಡ, ಆರಿಫ್, ನವಾಜ್ , ಶಫ್ವಾನ್, ರಾಜಾ ಟಿಪ್ಪು ಸುಲ್ತಾನ್,ಲತೀಫ್ ಬೋಳದಬೈಲು ಮತ್ತಿತರ ಯುವಕರು ಹರಸಾಹಸ ಪಟ್ಟು ಕಾರಿನಿಂದ ಹೊರಗೆಳೆದು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ   ಇಬ್ಬರು ಮೃತಪಟ್ಟಿದ್ದಾರೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment