Log In
BREAKING NEWS >
2020 ಮು೦ದಿನ ಪರ್ಯಾಯ ಮಹೋತ್ಸವವನ್ನು ನೆರವೇರಿಸಲಿರುವ ಶ್ರೀಅದಮಾರು ಮಠದ ಪರ್ಯಾಯಕ್ಕೆ ಶುಕ್ರವಾರದ೦ದು ಬಾಳೆ ಮಹೂರ್ತ-ಬೆಳಿಗ್ಗೆ 7.30ಕ್ಕೆ

ಹೃದಯಾಘಾತದ ಬಳಿಕ ಲೋಕಸಭಾ ಮಾಜಿ ಸ್ಪೀಕರ್ ಚಟರ್ಜಿ ಆರೋಗ್ಯ ಗಂಭೀರ

ಕೋಲ್ಕತಾ: ಲೋಕಸಭಾದ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಅವರಿಗೆ ಲಘು ಹೃದಯಾಘಾತವಾದ ಬಳಿಕ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿರುವುದಾಗಿ ಭಾನುವಾರ ಖಾಸಗಿ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

88 ವರ್ಷದ ಸೋಮನಾಥ್ ಚಟರ್ಜಿ ಅವರು ಕಿಡ್ನಿ ಸಂಬಂಧಿ ಸೋಂಕಿನಿಂದ ಬಳಲುತ್ತಿದ್ದಾರೆ. ತೀವ್ರ ಅನಾರೋಗ್ಯಗೊಂಡಿದ್ದ ಚಟರ್ಜಿಯವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಡಯಾಲಿಸೀಸ್ ಮಾಡಲಾಗುತ್ತಿದ್ದು, ಇಂದು ಬೆಳಗ್ಗೆ ಅವರಿಗೆ ಲಘು ಹೃದಯಾಘಾತವಾಗಿತ್ತು.

ಐಸಿಯುನಲ್ಲಿ ಚಟರ್ಜಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಕಳೆದ 40 ದಿನಗಳಿಂದ ಚಟರ್ಜಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಮೂರು ದಿನಗಳ ಹಿಂದಷ್ಟೇ ಆರೋಗ್ಯ ಸುಧಾರಿಸಿದ ಬಳಿಕ ಅವರನ್ನು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಮಾಡಲಾಗಿತ್ತು.

ಸಿಪಿಐ(ಎಂ)ನ ಹಿರಿಯ ಮುಖಂಡರಾಗಿರುವ ಸೋಮನಾಥ್ ಚಟರ್ಜಿ ಅವರು 10 ಬಾರಿ ಲೋಕಸಭಾ ಸಂಸದರಾಗಿದ್ದರು, 2004ರಿಂದ 2009ರವರೆಗೆ ಲೋಕಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ಯುಪಿಯ(1) ಸರ್ಕಾರಕ್ಕೆ ಸಿಪಿಐ(ಎಂ) ನೀಡಿದ್ದ ಬೆಂಬಲ ವಾಪಸ್ ಪಡೆದ ನಂತರ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲು ಚಟರ್ಜಿ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಪಿಐ(ಎಂ) ಸೋಮನಾಥ್ ಚಟರ್ಜಿ ಅವರನ್ನು ಪಕ್ಷದಿಂದ ಉಚ್ಛಾಟಿಸಿತ್ತು.

No Comments

Leave A Comment