Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಪ್ರವಾಹ ಹಿನ್ನೆಲೆ ಓಣಂ ಆಚರಣೆ ರದ್ದುಗೊಳಿಸಿದ ಕೇರಳ

ತಿರುವನಂತಪುರಂ: ಭಾರಿ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿರುವ ಕೇರಳದಲ್ಲಿ ಈ ವರ್ಷ ಓಣಂ ಆಚರಣೆಯನ್ನು ರದ್ದುಗೊಳಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಮಂಗಳವಾರ ಘೋಷಿಸಿದ್ದಾರೆ.
ಕೋಮು ಸಾಮಾರಸ್ಯ ಸಾರುವ ಸುಗ್ಗಿ ಹಬ್ಬ ಓಣಂ ಅನ್ನು ದೇವರ ನಾಡಿನಲ್ಲಿ ಪ್ರತಿವರ್ಷ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.
ಓಣಂ ಹಬ್ಬದ ಪ್ರಯುಕ್ತ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ಕೇರಳ ಸರ್ಕಾರ ಸುಮಾರು 30 ಕೋಟಿ ರುಪಾಯಿ ವೆಚ್ಚ ಮಾಡುತ್ತಿತ್ತು. ಈ ವರ್ಷ ಆ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯನ್ ಅವರು, ಈ ವರ್ಷ ಓಣಂ ಆಚರಣೆ ರದ್ದುಗೊಳಿಸಲಾಗಿದ್ದು, ಓಣಂ ಹಬ್ಬದ ಹಣವನ್ನು ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ಬಳಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
No Comments

Leave A Comment