Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

ಅಟಲ್‌ ಆರೋಗ್ಯ ಮತ್ತಷ್ಟು ಗಂಭೀರ; ಏಮ್ಸ್‌ಗೆ ಮೋದಿ, ಗಣ್ಯರ ದೌಡು

ಹೊಸದಿಲ್ಲಿ:ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ(93) ಅವರ ಆರೋಗ್ಯ ಸ್ಥಿತಿ  ಬುಧವಾರ ಇನ್ನಿಷ್ಟು ಗಂಭೀರವಾಗಿದೆ.

ಏಮ್ಸ್‌ ಈ ಬಗ್ಗೆ ಮಾಧ್ಯಮ ಪ್ರಕಟನೆ ನೀಡಿದ್ದು ಕಳೆದ 9 ವಾರಗಳಿಂದ ಚಿಕಿತ್ಸೆ ಪಡೆಯುತ್ತಿರುವ   ದುರದೃಷ್ಟವಶಾತ್, ವಾಜಪೇಯಿ ಅವರ ಆರೋಗ್ಯ ಸ್ಥಿತಿಯು ಇನ್ನಷ್ಟು ಹದಗೆಟ್ಟಿದೆ. ಆಮ್ಲಜನಕದ ಬೆಂಬಲದಲ್ಲಿ ಅವರು ಉಸಿರಾಡುತ್ತಿದ್ದಾರೆ ಎಂದು ತಿಳಿಸಿದೆ.

ಬುಧವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆ ಬಳಿಕ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸೇರಿದಂತೆ ಕೇಂದ್ರ ಸಚಿವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್‌ ಶಾ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

No Comments

Leave A Comment