Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಪಂಚಭೂತಗಳಲ್ಲಿ ಲೀನ

ನವದೆಹಲಿ

 

ಹಿಂದೂ ಬ್ರಾಹ್ಮಣ ಸಂಪ್ರದಾಯದಂತೆ ಪುರೋಹಿತರು ಹಾಗೂ  ಕುಟುಂಬ ಸದಸ್ಯರು ಅಂತಿಮ ವಿಧಿ ವಿಧಾನ ಕಾರ್ಯಗಳನ್ನು ನೆರವೇರಿಸಿದರು. 21 ಬಾರಿ ಕುಶಾಲ ತೋಪು ಸಿಡಿತ ಹಾಗೂ ಅಟಲ್ ಬಿಹಾರಿ ವಾಜಪೇಯಿ ಕೀ ಜೈ ಘೋಷಣೆ ನಡುವೆ ವಾಜಪೇಯಿ ಅವರ ದತ್ತುಪುತ್ರಿ ನಮಿತಾ ಭಟ್ಟಾಚಾರ್ಯ  ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಸಾರ್ಕ್ ರಾಷ್ಟ್ರಗಳ  ಗಣ್ಯರು  , ಕೇಂದ್ರ ಸಂಪುಟದ ಸಚಿವರು, ಎಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ನೂರಾರು ಮಂದಿ  ಅಂತ್ಯಕ್ರಿಯೆ ಸ್ಥಳದಲ್ಲಿ  ಹಾಜರಿದ್ದು, ಅಗಲಿದ ಹಿರಿಯ ನಾಯಕನಿಗೆ ಅಂತಿಮ ವಿದಾಯ ಹೇಳಿದರು.

ಇದಕ್ಕೂ ಮುನ್ನಾ ಬಿಜೆಪಿ ಕೇಂದ್ರ ಕಚೇರಿಯಿಂದ  ಮೆರವಣಿಗೆ ಮೂಲಕ ಸಾಗಿ ಬಂದ ವಾಜಪೇಯಿ ಅವರ ಪಾರ್ಥಿವ ಶರೀರಕ್ಕೆ  ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರಮೋದಿ, ಸಾರ್ಕ್ ರಾಷ್ಟ್ರಗಳ ಹಿರಿಯ ನಾಯಕರು, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್,  ಬಿಜೆಪಿ ಹಿರಿಯ ಮುಖಂಡ ಎಲ್ . ಕೆ. ಅಡ್ವಾಣಿ, ಪುಷ್ಪನಮನ ಸಲ್ಲಿಸಿದರು.

No Comments

Leave A Comment